Belagavi NewsBelgaum NewsKannada NewsKarnataka News

*ಜು.5 ರಿಂದ 8 ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆ*

ಪ್ರಗತಿವಾಹಿನಿ ಸುದ್ದಿ :  ಜುಲೈ 5 ರಿಂದ ಜುಲೈ 8 ರವರೆಗೆ ರಾಜ್ಯದಲ್ಲಿ ಭಾರಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕರಾವಳಿ ಮತ್ತು ಮಲೆನಾಡು ಭಾಗದ ಹಲವು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ಈ ಮೂರು ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಕಡ್ಡಾಯವಾಗಿ ಆರೆಂಜ್ ಅಲರ್ಟ್ ಘೋಷಿಸಿದೆ.

ಹಾಗೆಯೇ ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದರೊಂದಿಗೆ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಮಂಡ್ಯ ಮೈಸೂರು, ತುಮಕೂರು ಜಿಲ್ಲೆಗಳಿಗೂ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ನದಿ ತೀರದ ಜನರಿಗೆ ಮುನ್ನೆಚ್ಚರಿಕೆ ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

Home add -Advt

Related Articles

Back to top button