Kannada NewsKarnataka NewsLatest
*BREAKING: ಎರಡು ಬಿಎಂಟಿಸಿ ಬಸ್ ಗಳ ನಡುವೆ ಭೀಕರ ಅಪಘಾತ: ಚಾಲಕನ ಸ್ಥಿತಿ ಗಂಭೀರ: ಡ್ರೈವರ್ ಸೀಟ್ ಅಡಿ ಕಾಲು ಸಿಲುಕಿ ಹೊರಬರಲಾಗದೇ ಮಹಿಳೆಯ ಪರದಾಟ*

ಪ್ರಗತಿವಾಹಿನಿ ಸುದ್ದಿ: ಎರಡು ಬಿಎಂಟಿಸಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ. ಬಸ್ ಡ್ರೈವರ್ ಸೀಟ್ ಅಡಿಯಲ್ಲಿ ಮಹಿಳೆಯೊಬರ ಕಾಲು ಸಿಲುಕ್ಕೊಂಡಿದ್ದು, ಹೊರಬರಲಾಗದೇ ಮಹಿಳೆ ಪರದಾಡುತ್ತಿರುವ ಘಟನೆ ನಡೆದಿದೆ.
ಬೆಂಗಳೂರಿನ ಕೆ.ಆರ್. ವೃತ್ತದಲ್ಲಿ ಈ ಘಟನೆ ನಡೆದಿದೆ. ಸಿಗ್ನಲ್ ನಲ್ಲಿ ನಿಂತಿದ್ದ ಬಿಎಂಟಿಸಿ ವಾಯುವಜ್ರ ಬಸ್ ಗೆ ಹಿಂಬದಿಯಿಂದ ಬಂದ ಮತ್ತೊಂದು ಬಿರೆಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬಸ್ ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಘಟನೆಯಲ್ಲಿ ಚಾಲಕನ ಸ್ಥಿತಿ ಗಂಭೀರವಾಗಿದೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಆದರೆ ಬಸ್ ಚಾಲಕನ ಹಿಂಬದಿ ಸೀಟ್ ಕೆಳಗೆ ಮಹಿಳೆಯೊಬ್ಬರು ಸಿಲುಕಿಕೊಂಡಿದ್ದಾರೆ. ಮಹಿಳೆಯ ಕಾಲು ಮಾತ್ರ ಸಿಕ್ಕಿಕೊಂಡಿದ್ದು, ಆಕೆಯನ್ನು ರಕ್ಷಿಸಲು ಸ್ಥಳೀಯರು ಹಾಗೂ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.



