Kannada NewsLatestNationalPolitics

*BREAKING: ಏಕನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಏಕನಾಥ್ ಶಿಂಧೆ ಅವರು ಜ್ವರದಿಂದ ಬಳಲುತ್ತಿದ್ದು ಥಾಣೆಯ ಜುಪಿಟರ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಶುಕ್ರವಾರದಿಂದಲೇ ಅವರು ಲಘು ಜ್ವರ, ಮೈಕೈ ನೋವು ಮತ್ತು ತೀವ್ರ ಸುಸ್ತಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಯ ಮೂಲಗಳ ಪ್ರಕಾರ, ಏಕನಾಥ್ ಶಿಂಧೆಗೆ ಸದ್ಯ ರೂಟಿನ್ ಹೆಲ್ತ್ ಚೆಕಪ್ ಮಾಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಸಾರ್ವಜನಿಕರು ಹಾಗೂ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.


Home add -Advt

Related Articles

Back to top button