ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದ ಪ್ರಿಯಾಂಕ್ ಖರ್ಗೆ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಸಚಿವ ಸಂಪುಟ ವಿಸ್ತರಣೆ ಕಗ್ಗಂಟಾಗಿ ಪರಿಣಮಿಸಿ. ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಲು ಸಚಿವಾಕಾಂಕ್ಷಿಗಳು ಪಡುತ್ತಿರುವ ಓಡಾಟ, ಯಡಿಯೂರಪ್ಪನವರಿಗೇ ಬಿಜೆಪಿ ವರಿಷ್ಠರು ಭೇಟಿಯ ಅವಕಾಶ ನೀಡದೇ ಇರೋದು ಇದನ್ನೆಲ್ಲ ನೋಡಿದ್ರೆ ಅಯ್ಯೋ ಪಾಪ ಅನಿಸುತ್ತೆ. ಆದರೆ ಉಪ್ಪು ತಿಂದವರು ನೀರು ಕುಡಿಲೇಬೇಕು ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪರೇಷನ್ ಕಮಲ ಹೇಗೆ ನಡೀತು ಅಂತ ಎಲ್ಲರಿಗೂ ಗೊತ್ತೇ ಇದೆ. ಶಾಸಕರನ್ನು ಖರೀದಿ ಮಾಡಿ, ಸರ್ಕಾರ ರಚನೆ ಮಾಡಲಾಗಿದೆ. ವಲಸಿಗರಿಗೆ ಸಚಿವ ಸ್ಥಾನ ಕೊಡುತ್ತಿರುವುದರಿಂದ ಮೂಲ ಬಿಜೆಪಿಗರಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಸಚಿವ ಸಂಪುಟ ವಿಸ್ತರಣೆಯಾದ ಒಂದು ವಾರದಲ್ಲಿ ಅಸಮಾಧಾನ ಬಹಿರಂಗವಾಗುತ್ತೆ ಎಂದರು.

ಸಚಿವ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಭೇಟಿಗೆ ಸಿಎಂ ನಾಲ್ಕು ದಿನ ಕಾದ್ರು, ಹಿರಿಯ ನಾಯಕರ ಭೇಟಿಗಾಗಿ ಪರದಾಡುವಂತಾಗಿದೆ. ಯಡಿಯೂರಪ್ಪ ಪ್ರಬಲ ನಾಯಕ. ಆದರೆ, ಅವರಿಗೆ ಭೇಟಿಯ ಅವಕಾಶವನ್ನೇ ಹೈಕಮಾಂಡ್ ನೀಡುತ್ತಿಲ್ಲ. ಸಿಎಂ ಯಡಿಯೂರಪ್ಪ ಸ್ಥಿತಿ ನೋಡಿದ್ರೆ ಬೇಜಾರಾಗುತ್ತೆ ಎಂದು ವ್ಯಂಗ್ಯವಾಡಿದರು.

ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ಬಿಟ್ಟರೇ ಬೇರೆ ನಡೀತಿಲ್ಲ. ಪೊಲೀಸ್ ಪೇದೆ ಯಿಂದ ಹಿಡಿದು ಜಿಲ್ಲಾಧಿಕಾರಿವರೆಗೂ ವರ್ಗಾವಣೆಗೆ ಹಣವನ್ನು ಫಿಕ್ಸ್ ಮಾಡಿದ್ದಾರೆ ಎಂದು ಆರೋಪಿಸಿದರು. ನೆರೆ ಮತ್ತು ಬರದಿಂದ ಜನರು ಸಂಕಷ್ಟಕ್ಕೆ ಗುರಿಯಾದರೂ ಅವರ ಬಗ್ಗೆ ಸರ್ಕಾರಕ್ಕೆ ಕಾಳಜಿಯೇ ಇಲ್ಲ. ಆಡಳಿತದಲ್ಲಿ ಕೇಸರೀಕರಣ ಮಾಡುವ ಹುನ್ನಾರ ನಡೀತಿದೆ ಕಿಡಿಕಾರಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button