
ಪ್ರಗತಿವಾಹಿನಿ ಸುದ್ದಿ: ದುರಂತೋ ಎಕ್ಸ್ ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ತಕ್ಷಣ ಅಲರ್ಟ್ ಆದ ರೈಲ್ವೆ ಪೊಲೀಸರು ರೈಲು ನಿಲ್ಲುಸಿ ಪರಿಶೀಲನೆ ನಡೆಸಿದ್ದಾರೆ.
ಕೋಲ್ಕತ್ತಾದ ಹೌರಾ ಜಂಕ್ಷನ್‌ನಿಂದ ಬೆಂಗಳೂರಿನ ಎಸ್‌ಎಂವಿಟಿಗೆ ಆಗಮಿಸುತ್ತಿದ್ದ ದುರಂತೋ ಎಕ್ಸ್‌ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ದುರಂತೋ ಎಕ್ಸ್ ಪ್ರೆಸ್ ರೈಲಿನಲ್ಲಿ ಬಂಬ್ ಇಡಲಾಗಿದೆ ಎಂದು ಆಗಂತುಕನೊಬ್ಬ ರೈಲ್ವೆ ಪೊಲೀಸರಿಗೆ ಕರೆ ಮಾಡಿದ್ದಾನೆ. ತಕ್ಷಣ ಅಲರ್ಟ್ ಆದ ರೈಲ್ವೆ ಪೊಲೀಸರು ಕೋಲಾರ ಜಿಲ್ಲೆಯ ಬಂಗಾರಪೇಟೆ ರೈಲ್ವೆ ಜಂಕ್ಷನ್‌ನಲ್ಲಿ ರೈಲು ನಿಲ್ಲಿಸಿ ಪರಿಶೀಲನೆ ಮಾಡಿದರು.
ಈ ವೇಳೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ಸಿಬ್ಬಂದಿ ಪ್ರಯಾಣಿಕರನ್ನು ರೈಲಿನಿಂದ ಕೆಳಗಿಳಿಸಿ ಬಂಗಾರಪೇಟೆ ಪ್ಲಾಟ್ಫಾರ್ಮ್ ನಂ.1ರಲ್ಲಿ ತಪಾಸಣೆ ಮಾಡಿದರು.
ರೈಲಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಓರ್ವ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಧಿತ ಪಶ್ಚಿಮ ಬಂಗಾಳ ಮೂಲದ ಶಶಾಂಕ್ ಡೌಲಾ ಎಂದು ಗುರುತಿಸಲಾಗಿದೆ. ಈತ ಅದೇ ರೈಲಿನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.


