Belagavi NewsBelgaum NewsKarnataka NewsLatest
*ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾಲ್ಗೊಂಡ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ : ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಬೆಳಗಾವಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದರು.
ಈ ಸಾಂವಿಧಾನಿಕ ಮತದಾರರ ನೋಂದಣಿ ಪ್ರಕ್ರಿಯೆಯು ವ್ಯವಸ್ಥಿತವಾಗಿ ನಡೆಯುತ್ತಿರುವ ಕುರಿತು ಅಲ್ಲಿನ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಪ್ರಗತಿಯ ಮಾಹಿತಿ ಪಡೆದರು.

ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಖಚಿತಪಡಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದ್ದು, ತಮ್ಮ ಮನೆಗಳಿಗೆ ಆಗಮಿಸಲಿರುವ ಬೂತ್ ಲೆವಲ್ ಆಫೀಸರ್ (BLO) ಹಾಗೂ ಬೂತ್ ಲೆವಲ್ ಏಜೆಂಟ್ ಗಳೊಂದಿಗೆ (BLA) ಸಹಕಾರ ನೀಡುವಂತೆ ಅವರು ಕೋರಿದರು.

