Belagavi NewsBelgaum NewsKannada NewsKarnataka NewsNational
*ಉಕ್ಕಿ ಹರಿಯುತ್ತಿದೆ ಮಲಪ್ರಭಾ ನದಿ: ಹಬ್ಬನಹಟ್ಟಿಯ ಮಾರುತಿ ದೇವಸ್ಥಾನ ಜಲಾವೃತ*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮಘಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಐದಾರು ದಿನದಿಂದ ಸುರಿಯುತ್ತಿರುವ ಮಳೆಗೆ ಖಾನಾಪುರ ತಾಲೂಕಿನ ಜಂಬೋಟಿಯ ಮಲಪ್ರಭಾ ನದಿಯ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಕ್ಷೇತ್ರ ಹಬ್ಬನಹಟ್ಟಿಯ ಸ್ವಯಂಭೂ ಮಾರುತಿ ದೇವಸ್ಥಾನವು ನೀರಿನಲ್ಲಿ ಮುಳುಗಡೆಯಾಗಲು ಪ್ರಾರಂಭಿಸಿದೆ.
ಘಾಟ್ ಪ್ರದೇಶ ಹಾಗೂ ಜಂಬೋಟಿ ಭಾಗದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಮಲಪ್ರಭಾ ನದಿಗೆ ಪ್ರವಾಹದ ಭೀತಿ ಎದುರಾಗಿದ್ದು, ದೇವಸ್ಥಾನದ ಆವರಣ ಸಂಪೂರ್ಣ ಜಲಾವೃತಗೊಂಡಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ನದಿ ತೀರದ ಸಾರ್ವಜನಿಕರು ಮತ್ತು ಭಕ್ತಾದಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಜಾಗರೂಕರಾಗಿರುವಂತೆ ಆಡಳಿತ ಮಂಡಳಿ ಮತ್ತು ಸ್ಥಳೀಯ ಆಡಳಿತ ಸೂಚನೆ ನೀಡಿದೆ.




