Belagavi NewsBelgaum NewsKannada NewsKarnataka NewsLatest
*ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಬೆಳಗಾವಿಗೆ*

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಬೆಳಗಾವಿಗೆ ಭೇಟಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆದಮೇಲೆ ಮೊದಲ ಬಾರಿಗೆ ಜುಲೈ 9, ಗುರುವಾರ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಈ ವೇಳೆ ಬೆಳಗಾವಿ ಪ್ರಾದೇಶಿಕ ವಿಭಾಗದ ವ್ಯಾಪ್ತಿಯಲ್ಲಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಿದ್ದಾರೆ.
ಮುಖ್ಯಮಂತ್ರಿಗಳು ಗುರುವಾರ ಬೆಳಿಗ್ಗೆ 10.10 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ 10.30 ಗಂಟೆಗೆ ಸುವರ್ಣ ವಿಧಾನಸೌಧಕ್ಕೆ ತೆರಳಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಅವರು ಗುರುವಾರ ಬೆಳಗಾವಿಯಲ್ಲೇ ವಾಸ್ತವ್ಯ ಮಾಡುವ ಸಾಧ್ಯತೆ ಇದೆ.




