Belagavi NewsBelgaum NewsKannada NewsKarnataka News

*ಲಕ್ಷ್ಮೀತಾಯಿ ಫೌಂಡೇಶನ್‌ನಿಂದ ಭಾಗ್ಯಶ್ರೀ ಚಿಕಿತ್ಸೆಗೆ ಆರ್ಥಿಕ ನೆರವು*

ಲಕ್ಷ್ಮೀತಾಯಿ ಫೌಂಡೇಶನ್‌ನಿಂದ ಭಾಗ್ಯಶ್ರೀ ಚಿಕಿತ್ಸೆಗೆ ಆರ್ಥಿಕ ನೆರವು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಖಾನಾಪುರ ತಾಲೂಕಿನ ಲಾಲವಾಡಿ ಗ್ರಾಮದ ನಿವಾಸಿ ಜ್ಯೋತಿಬಾ ಉತ್ತೂರಕರ್ ಅವರ ಪುತ್ರಿ ಭಾಗ್ಯಶ್ರೀ ಅವರ ತುರ್ತು ಆರೋಗ್ಯ ಚಿಕಿತ್ಸೆಗೆ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವರು ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ನೆರವಿನ ಚೆಕ್‌ ಅನ್ನು ಕುಟುಂಬದವರಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾಗ್ಯಶ್ರೀ ಅವರು ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗಿ ಆರೋಗ್ಯವಂತರಾಗಿ ಮರಳಲಿ ಎಂದು ಹಾರೈಸಿದರು. ಸಂಕಷ್ಟದ ಸಮಯದಲ್ಲಿ ಕುಟುಂಬದೊಂದಿಗೆ ನಿಲ್ಲುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಅಗತ್ಯವಿರುವವರಿಗೆ ನೆರವು ನೀಡುವ ಕಾರ್ಯವನ್ನು ಲಕ್ಷ್ಮೀತಾಯಿ ಫೌಂಡೇಶನ್ ನಿರಂತರವಾಗಿ ಮುಂದುವರಿಸಲಿದೆ ಎಂದು ತಿಳಿಸಿದರು.

Home add -Advt


ಈ ವೇಳೆ ಭಾಗ್ಯಶ್ರೀ ಅವರ ಪಾಲಕರು ಉಪಸ್ಥಿತರಿದ್ದು, ನೆರವಿಗಾಗಿ ಲಕ್ಷ್ಮೀತಾಯಿ ಫೌಂಡೇಶನ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಚನ್ನರಾಜ ಹಟ್ಟಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

Related Articles

Back to top button