*ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳು ಮೈದುಂಬಿ ಹರಿಯುತ್ತಿವೆ. ಈ ನಿರಂತರ ಮಳೆಯಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆಯಾ ಜಿಲ್ಲಾಡಳಿತಗಳು ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ನೀಡುವ ನಿರ್ಧಾರವನ್ನು ತೆಗೆದುಕೊಂಡಿವೆ.
ಬೆಳಗಾವಿ ಜಿಲ್ಲೆಯ, ಬೆಳಗಾವಿ, ಖಾನಾಪುರ, ನಿಪ್ಪಾಣಿ ತಾಲೂಕಿನ ಅಂಗನವಾಡಿಯಿಂದ ಪಿಯುಸಿ ವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಕ್ಕ ಸುರಕ್ಷತೆಯ ದೃಷ್ಟಿಯಿಂದ ಕೊಡಗು, ಉತ್ತರ ಕನ್ನಡದ ಸಾಗರ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಮಳೆ ಅಬ್ಬರ ಹೆಚ್ಚಾಗಿರುವ ಕಡೆ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ.



