Belagavi NewsBelgaum NewsKannada NewsKarnataka News
*ಘಟಪ್ರಭಾ ನದಿಯ ಒಳಹರಿವು ಹೆಚ್ಚಳ: ಸೇತುವೆ ಜಲಾವೃತ, ಹಲವು ಗ್ರಾಮಗಳ ಸಂಪರ್ಕ ಕಡಿತ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸತತ ಮಳೆಯಿಂದ ಘಟಪ್ರಭಾ ನದಿಗೆ ಒಳಹರಿವು ಹೆಚ್ಚಾಗಿದ್ದು, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಅವರಾದಿ ಬಳಿಯ ಬ್ರಿಡ್ಜ್ ಕಂ ಬ್ಯಾರೆಜ್ ಜಲಾವೃತಗೊಂಡಿದೆ.
ಇದರಿಂದ ಹಲವು ಗ್ರಾಮಗಳ ಸಂಪರ್ಕ ಸ್ಥಗಿತಗೊಂಡಿದೆ. ನದಿಯ ನೀರಿನ ಮಟ್ಟವು ಇನ್ನು ಏರಿಕೆಯಾಗುವ ಸಂಭವವಿದ್ದು ಮೂಡಲಗಿ ಸುಣಧೋಳಿ ಸಂಪರ್ಕ ಇರುವ ಸುಣಧೋಳಿ ಸೇತುವೆ, ವಡೇರಹಟ್ಟಿ ಸೇತುವೆ, ಕಮಲದಿನ್ನಿ ಸೇತುವೆಗಳು ಜಲಾವೃತವಾಗುವ ಸಾಧ್ಯತೆಗಳು ಇವೆ.
ಘಟಪ್ರಭಾ ನದಿಗೆ ಒಳಹರಿವು ಹೆಚ್ಚಾದಾಗ ತಾಲ್ಲೂಕಿನ ನಾಲ್ಕು ಸೇತುವೆಗಳು ಜಲಾವೃತಗೊಂಡು ಸಂಚಾರಕ್ಕೆ ತೊಂದರೆಯಾಗುತ್ತಿರುವುದು ಸಾಮಾನ್ಯವಾಗಿದೆ. ಸೇತುವೆ ಮೇಲೆ ರಭಸದ ನೀರು ಹರಿಯುತ್ತಿದ್ದಾಗಲೂ ಜನರು ಬೈಕ್, ಕಾಲ್ನಡಿಗೆಯಲ್ಲಿ ದಾಟುವ ಹುಚ್ಚು ಪ್ರಯತ್ನ ಮಾಡಿ ಅನೇಕ ಸಾವುಗಳು ಈ ಹಿಂದೆ ಇಲ್ಲಿ ಘಟಿಸಿವೆ.




