
ಪ್ರಗತಿವಾಹಿನಿ ಸುದ್ದಿ: ನಕಲಿ ದಾಖಲೆ ಸಲ್ಲಿಸಿದ ಆರೋದಲ್ಲಿ ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಅವರ ಪುತ್ರಿ ಸುಮಾ ಎಸ್ ಸಹುಕಾರ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ನಕಲಿ ಆದಾಯ ಪತ್ರ ಮತ್ತು ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸಿರುವ ಆರೋಪದ ಹಿನ್ನೆಲೆಯಲ್ಲಿ ಸುಮಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಭ್ಯರ್ಥಿಗಳ ದಾಖಲೆ ಪರಿಶೀಲನೆ ವೇಳೆ ಸುಮಾ ಸಲ್ಲಿಸಿರುವ ದಖಲಿ ದಾಖೆಗಳ ಬಗ್ಗೆ ಗಮನಕ್ಕೆ ಬಂದಿತ್ತು.
ಸುಮಾ ಅವರು ತಮ್ಮ ಕುಟುಂಬದ ವಾರ್ಷಿಕ ಆದಾಯವನ್ನು 40,000 ರೂಪಾಯಿ ಎಂದು ನಮೂದಿಸಿದ್ದಾರೆ. ಆದರೆ, ಅವರ ತಂದೆ ಶಿವಶಂಕರಪ್ಪ ಅವರ ಮಾಸಿಕ ವೇತನವೇ 2,25,000 ರೂಪಾಯಿ ಆಗಿದ್ದು, ಇದು ವಾರ್ಷಿಕ 40,000 ರೂಪಾಯಿ ಆದಾಯಕ್ಕಿಂತ ಗಣನೀಯವಾಗಿ ಹೆಚ್ಚಾಗಿದೆ. ಸುಳ್ಳು ದಾಖಲೆಗಳನ್ನು ನೀಡಿ ಮೀಸಲಾತಿ ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.




