ವೈಯಕ್ತಿಕ ತೆರಿಗೆದಾರರಿಗೆ ಬಿಗ್ ರಿಲೀಫ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: 2020-21ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ವೈಯಕ್ತಿಕ ಆದಾಯ ತೆರಿಗೆದಾರರಿಗೆ ಬಿಗ್ ರಿಲೀಫ್ ನೀಡಿದ್ದಾರೆ. ಆದಾಯ ತೆರಿಗೆ ಪಾವತಿಸುವವರಿಗೆ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದ್ದು, ವೇತನದಾರರಿಗೆ ತೆರಿಗೆ ಭಾರ ಕಡಿತ ಮಾಡಲಾಗಿದೆ.

5 ಲಕ್ಷದವರೆಗೆ ಯಾವುದೇ ಆದಾಯ ತೆರಿಗೆ ಪಾವತಿಸಬೇಕಿಲ್ಲ. 5 ರಿಂದ 7.5 ಲಕ್ಷದವರೆಗೆ ಶೇ. 10ರಷ್ಟು ತೆರಿಗೆ ಪಾಅವತಿ ಅಗತ್ಯವಿದೆ. 7.5ರಿಂದ 10 ಲಕ್ಷದವರೆಗೆ ಶೇ.15ರಷ್ಟು ತೆರಿಗೆ, 10 ರಿಂದ 12.5ರವರೆಗೆ ಶೇ.20ರಷ್ಟು ತೆರಿಗೆ ,12.5ರಿಂದ 15 ಲಕ್ಷದವರೆಗೆ ಶೇ. 25ರಷ್ಟು ತೆರಿಗೆ, 15 ಲಕ್ಷಕ್ಕಿಂತ ಹೆಚ್ಚಿನ ಆದಾಯಕ್ಕೆ ಶೇ. 30ರಷ್ಟು ತೆರಿಗೆ ಪಾವತಿ ಮಾಡಬೇಕು.

ಇನ್ನು ಕಾರ್ಪೊರೇಟ್ ವಲಯಕ್ಕೂ ತೆರಿಗೆ ಗಿಫ್ಟ್ ನೀಡಲಾಗಿದ್ದು, ಹೊಸ ಕಂಪನಿಗಳಿಗೆ ವಿಧಿಸುವ ಕಾರ್ಪೊರೇಟ್ ತೆರಿಗೆಯನ್ನು ಶೇ. 15ಕ್ಕೆ ಇಳಿಕೆ ಮಾಡಲಾಗಿದೆ.

ತೆರಿಗೆದಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದ್ದು, ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಸ್ಥಾಪನೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button