Kannada NewsLatest
*ಔಷಧಿ ತೆಗೆದುಕೊಂಡು ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತ: ಮಗ ಹಾಗೂ ಚಿಕ್ಕಮ್ಮ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿರುವ ಘಟನೆ ನಡೆದಿದೆ.
ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಕಬಿರಾಬಾದ್ ವಾಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಈ ಘಟನೆ ನಡೆದಿದೆ. ಮೃತರನ್ನು ದುಬಲಗುಂಡಿ ಗ್ರಾಮದ ಸವಾರ ಪವನ್(22) ಮತ್ತು ಅವರ ಚಿಕ್ಕಮ್ಮ ನರಸಮ್ಮ ಎಂದು ಗುರಿತಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಪವನ್‌ನ ತಲೆಗೆ ಪೆಟ್ಟಾಗಿ ಸಾವನ್ನಪ್ಪಿದ್ದರೆ, ಬೈಕ್ ನಲ್ಲಿ ಹಿಂದೆ ಕುಳಿತಿದ್ದ ನರಸಮ್ಮ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾಮಾಲೆ ರೋಗಕ್ಕೆ ಔಷಧಿ ತೆಗೆದುಕೊಳ್ಳಲೆಂದು ಮನ್ನಾಏಖೇಳ್ಳಿ ಗ್ರಾಮಕ್ಕೆ ಹೋಗಿದ್ದ ಮಗ, ಚಿಕ್ಕಮ್ಮ ನಾಟಿಮದ್ದು ಹಾಕಿಸಿಕೊಂಡು ಹಿಂತಿರುಗುತ್ತಿದ್ದ ವೇಳೆ ಬೀದರ್-ಕಲಬುರಗಿ ಮಾರ್ಗದಲ್ಲಿ ಬಸ್ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




