
ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್ ನ ನ್ಯಾ. ಶ್ರೀರಾಮ ನಾರಾಯಣ ಹೆಗಡೆ, ವಚನಾನಂದ ಶ್ರೀಗಳಿಗೆ ಕೆಲ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿದ್ದಾರೆ.
ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ರದ್ದು ಮಾಡಿ ರೆಗ್ಯುಲರ್ ಬೇಲ್ ಪಡೆಯುವಂತೆ ಜೂ.25ರಂದು ಸ್ವಾಮೀಜಿಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆ ಜೂನ್ 27ರಂದು ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್ಗೆ ವಚನಾನಂದ ಶ್ರೀ ಅರ್ಜಿ ಸಲ್ಲಿಸಿದ್ದರು. ಎರಡು ಕಡೆಯವರ ವಾದವನ್ನು ಈಗಾಗಲೇ ಆಲಿಸಿದ್ದ ನ್ಯಾಯಾಲಯ ಸ್ವಾಮೀಜಿಗೆ ರೆಗ್ಯುಲರ್ ಬೇಲ್ ನೀಡಿದೆ.


