*ಐಎಎಸ್ ಹಾಗೂ ಕೆಎಎಸ್ ಅಧಿಕಾರಿಗಳ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಇಬ್ಬರು ಐಎಎಸ್ ಹಾಗೂ ಇಬ್ಬರು ಕೆಎಎಸ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿಗಳ ವರ್ಗಾವಣೆ
ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತರಾಗಿದ್ದ ದಿವ್ಯಾ ಪ್ರಭು ಜಿ.ಆರ್.ಜೆ ಅವರನ್ನು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (KREDL)ನ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಜೊತೆಗೆ, ಅವರು ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ಮುಂದುವರಿಸಲಿದ್ದಾರೆ.
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೆ. ಪಿ. ರುದ್ರಪ್ಪಯ್ಯ ಅವರನ್ನು ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ (PCKL)ನ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಕೆಎಎಸ್ ಅಧಿಕಾರಿಗಳ ವರ್ಗಾವಣೆ
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಪ್ರಭಾವತಿ ಫಕೀರಪ್ಪಗೋಳ (ಕಿರಿಯ ಶ್ರೇಣಿ) ಅವರನ್ನು ಧಾರವಾಡ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿದ್ದ ಡಾ. ಸಂತೋಷ್ ಹಾನಗಲ್ಲ ಅವರಿಗೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

