Belagavi NewsBelgaum NewsKannada NewsKarnataka NewsNationalPolitics
*ಗೃಹಲಕ್ಷ್ಮೀಯರಿಗೆ ಸಿಹಿ ಸುದ್ದಿ: 31ನೇ ಕಂತಿನ ಹಣ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ಲಕ್ಷಾಂತರ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ ಮಾಡುವ ಮೂಲಕ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ.
ಒಟ್ಟು 2,400 ಕೋಟಿ ರೂಪಾಯಿ ಹಣವನ್ನು ಸರ್ಕಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ರಾಜ್ಯದ ಲಕ್ಷಾಂತರ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ತಲಾ 2,000 ರೂ ಹಣ ಜಮೆಯಾಗಲು ಪ್ರಕ್ರಿಯೆ ಆರಂಭವಾಗಿದೆ.
ರಾಜ್ಯದಲ್ಲಿ ಈ ಯೋಜನೆ ಆರಂಭವಾದಾಗಿನಿಂದ ಇದುವರೆಗೆ ಭಾರಿ ಪ್ರಮಾಣದ ಹಣವನ್ನು ಮಹಿಳೆಯರ ಸಬಲೀಕರಣಕ್ಕಾಗಿ ಹಂಚಿಕೆ ಮಾಡಲಾಗಿದೆ.



