EducationKannada NewsKarnataka NewsLatest

*ಭಾರಿ ಮಳೆ: ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಭಾರತೀಯ ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಕಾರಣ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೋರಡಿಸಿದೆ.

ಕನ್ನಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು ಈ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳು ಅನಗತ್ಯವಾಗಿ ಹೊರಗೆ ಓಡಾಡದಂತೆ ಹಾಗೂ ನದಿ, ಹಳ್ಳ-ಕೊಳ್ಳಗಳಿರುವ ತಗ್ಗು ಪ್ರದೇಶಗಳಿಗೆ ತೆರಳದಂತೆ ಜಾಗ್ರತೆ ವಹಿಸಲು ಸೂಚಿಸಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಅಧಿಕಾರಿಗಳು, ತುರ್ತು ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಕರಾವಳಿ ತೀರದಲ್ಲಿ ಗಾಳಿಯ ವೇಗ ಹೆಚ್ಚಿರುವುದರಿಂದ ಹಾಗೂ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿರುವ ಕಾರಣ, ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವ ಮೂಲಕ ಸಹಕರಿಸಬೇಕು ಮತ್ತು ತುರ್ತು ಸಂದರ್ಭಗಳಲ್ಲಿ ಜಿಲ್ಲಾಡಳಿತದ ಸಹಾಯವಾಣಿಯನ್ನು ಸಂಪರ್ಕಿಸಬೇಕು ಎಂದು ವಿನಂತಿಸಲಾಗಿದೆ.

Home add -Advt

Related Articles

Back to top button