Kannada NewsLatestNational

*21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಆರೋಗ್ಯ ಸ್ಥಿತಿ ಗಂಭೀರ: ಕೋರ್ಟ್ ಆದೇಶದಂತೆ ಆಸ್ಪತ್ರೆಗೆ ಶಿಫ್ಟ್*

ಪ್ರಗತಿವಾಹಿನಿ ಸುದ್ದಿ: ನೀಟ್ ಪರೀಕ್ಷಾ ಅಕ್ರಮ ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ತೆಗೆ ಶಿಫ್ಟ್ ಮಾಡಲಾಗಿದೆ

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಕಾಕ್ರೋಚ್‌ ಜನತಾ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ವಾಂಗ್ಚುಕ್‌ ಅವರು ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿರುವುದರಿಂದ ಹೈಕೋರ್ಟ್ ಆದೇಶಗಳಿಗೆ ಅನುಸಾರವಾಗಿ ಮತ್ತು ತಜ್ಞರ ವೈದ್ಯಕೀಯ ಸಲಹೆಯ ಮೇರೆಗೆ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಅವರನ್ನು ಅಗತ್ಯ ವೈದ್ಯಕೀಯ ಆರೈಕೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ . ಪ್ರತಿಭಟನಾಕಾರರು ಜಂತರ್ ಮಂತರ್ ಅನ್ನು ಶಾಂತಿಯುತವಾಗಿ ತೆರವುಗೊಳಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಹೈಕೋರ್ಟ್‌ನ ಆದೇಶದಂತೆ ಸೋನಮ್ ಅವರನ್ನು ಸ್ಥಳಾಂತರಿಸುವಾಗ ಜಂತರ್ ಮಂತರ್ ನಲ್ಲಿ ಹೈಡ್ರಾಮಾ ನಡೆಯಿತು. ಪ್ರತಿಭಟನಾಕಾರರು ಅಡಚಣೆ ಉಂಟುಮಾಡಲು ಪ್ರಯತ್ನಿಸಿದರು. ಇದರಿಂದ ಗದ್ದಲ ಉಂಟಾಯಿತು. ಆದಾಗ್ಯೂ, ಪೊಲೀಸರು ಸಂಯಮದಿಂದ ಸುರಕ್ಷಿತವಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Home add -Advt

ವಾಂಗ್ಚುಕ್‌ ಅವರ ದೈನಂದಿನ ವೈದ್ಯಕೀಯ ಆರೋಗ್ಯ ತಪಾಸಣೆ ನಡೆಸುವಂತೆ ನ್ಯಾಯಾಲಯ ಎರಡು ದಿನಗಳ ಹಿಂದೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಶುಕ್ರವಾರ, ವಾಂಗ್ಚುಕ್ ಅವರನ್ನು ಪರೀಕ್ಷಿಸಿದ ವೈದ್ಯರು, ಅವರ ಅಂಗಾಂಗಗಳು ವಿಫಲಗೊಳ್ಳುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Related Articles

Back to top button