Kannada NewsKarnataka NewsLatest

*ಕೊಡಚಾದ್ರಿಯಲ್ಲಿ ಮತ್ತೊಂದು ದುರಂತ: ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದೆ ಕೊಡಚಾದ್ರಿ ಚಾರಣಕ್ಕೆ ಹೋಗಿದ್ದ ಖ್ಯಾತ ನಿರ್ಮಾಪಕರ ಪುತ್ರರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದ ಘಟನೆ ನಡೆದಿತ್ತು. ಇದೀಗ ಈ ಘಟನೆ ಮಾಸುವ ಮುನ್ನವೇ ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆ ಸಮೀಪದ ಕಟ್ಟಿನಹೊಳೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಮೂಲದ ಶ್ರೀಕಾಂತ್ (28) ಮೃತ ದುರ್ದೈವಿ.

ಶ್ರೀಕಾಂತ್ ಮೂವರು ಸ್ನೇಹಿತರೊಂದಿಗೆ ಕೊಡಚಾದ್ರಿ ಪ್ರವಾಸಕ್ಕೆ ತೆರಳಿದ್ದರು. ಕಟ್ಟಿನಹೊಳೆ ಗ್ರಾಮದ ಸ್ನೇಹಿತನ ಮನೆಯಲ್ಲಿ ತಂಗಿದ್ದರು. ಶನಿವಾರ ಗೆಳೆಯರೆಲ್ಲರೂ ಕೂಡಿ ಬೆಳಗ್ಗೆ ಕೊಡಚಾದ್ರಿ ಶಿಖರಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದರು. ರಾತ್ರಿ ಏಕಾಏಕಿ ಶ್ರೀಕಾಂತ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದಿದ್ದಾನೆ. ತಕ್ಷಣ ಸ್ನೇಹಿತರು ಆತನನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮೊದಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button