Kannada NewsKarnataka NewsLatest

*ಪ್ರವಾಸಕ್ಕೆ ಹೋಗಿದ್ದಾಗ ದುರಂತ: ಬಾವಿಗೆ ಬಿದ್ದು ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಪ್ರವಾಸಕ್ಕೆ ಹೋಗಿದ್ದ ವೇಳೆ ಬಾಲಕನೋರ್ವ ಪುರಾತನ ಕಾಲದ ಬಾವಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬಾಗಳಿಯ ಶ್ರೀ ಕಲ್ಲೇಶ್ವರ ದೇಗುಲದ ಬಳಿ ಈ ದುರಂತ ಸಂಭವಿಸಿದೆ. ವಿಷ್ಣು (10) ಮೃತಪಟ್ಟ ಬಾಲಕ. ವಿಷ್ಣು ಹರಪನಹಳ್ಳಿಯ ಗಾಜಿನಕೇರಿಯ ನಿವಾಸಿಗಳಾದ ವಿನೋದ್ – ವಿದ್ಯಾ ದಂಪತಿ ಪುತ್ರ.

ಕುಟುಂಬ ಸದ್ಯಸರು ಮಕ್ಕಳ ಜೊತೆ ಪ್ರವಾಸಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದ್ದು, ಮಗನನ್ನು ಕಳೆದುಕೊಂಡ ತಂದೆ, ತಾಯಿಯರ ಆಕ್ರಂದನ ಮುಗಿಲು ಮುಟ್ಟಿದೆ.

ಹರಪನಹಳ್ಳಿಯ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಮೃತದೇಹ ಹೊರ ತೆಗೆದಿದ್ದಾರೆ. ಘಟನೆ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button