Kannada NewsLatestNational

*ಸಹೋದ್ಯೋಗಿಗೆ ಲೈಂಗಿಕ ಕಿರುಕುಳ, ಬ್ಲ್ಯಾಕ್ ಮೇಲ್ ಆರೋಪ: ಐಪಿಎಸ್ ಅಧಿಕಾರಿ ಆತ್ಮಹತ್ಯೆಗೆ ಯತ್ನ*

ಸ್ಥಿತಿ ಗಂಭೀರ


ಪ್ರಗತಿವಾಹಿನಿ ಸುದ್ದಿ:
ಸಹೋದ್ಯೋಗಿ ಹಾಗೂ ತರಬೇತಿ ನಿರತ ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳನೀಡಿದ್ದ ಆರೋಪ ಎದುರಿಸುತ್ತಿರುವ ತರಬೇತಿ ನಿರತ ಐಪಿಎಸ್ ಅಧಿಕಾರಿ ಉದಯ್ ಕೃಷ್ಣಾ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಹೈದರಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ (NPA) ತರಬೇತಿ ಪಡೆಯುತ್ತಿದ್ದ ಐಪಿಎಸ್ ಅಧಿಕಾರಿ ಉದಯ್ ಕೃಷ್ಣಾ ರೆಡ್ಡಿ, ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಆಸ್ಪತ್ರೆಗೆ ದಖಲಿಸಲಾಗಿದೆ, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Home add -Advt

ಕರ್ನಾಟಕ ಮೂಲದ ತರಬೇತಿ ನಿರತ ಮಹಿಳಾ ಐಪಿಎಸ್ ಅಧಿಕಾರಿಗೆ ಉದಯ್ ಕೃಷ್ನಾರೆಡ್ದಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ವಿಡಿಯೋ ರೆಕಾರ್ಡ್ ಮಾಡಿ ಆಕೆಯ ಪತಿಗೆ ಕಳುಹಿಸಿಸಿ ಬ್ಲ್ಯಾಕ್ ಮೇಲ್ ಮಾಡಿದ್ದರಂತೆ. ಈ ಬಗ್ಗೆ ಸಂತ್ರಸ್ತೆ ಕರ್ನಾಟಕ ಮೂಲದ ವಿವಾಹಿತ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಉದಯ್ ಕೃಷ್ಣಾ ರೆಡ್ಡಿ ವಿರುದ್ಧ ದೂರು ನೀಡಿದ್ದಾರೆ ಉದಯ್ ತನಗೆ ನಿರಂತರವಾಗಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ. ಕೋಣೆಯಲ್ಲಿ ಕೂಡಿಹಾಕಿ, ಕೂದಲು ಹಿಡಿದು ಕುತ್ತಿಗೆ ಹಿಸುಕಲು ಯತ್ನಿಸಿ ಚಾಕು ತೋರಿಸಿ ಬೆದರಿಕೆ ಹಾಕಿದ್ದ. ಅಲ್ಲದೇ ಖಾಸಗಿ ವೀಡಿಯೊವನ್ನು ರಹಸ್ಯವಾಗಿ ರೆಕಾರ್ಡ್ ಮಾಡಿ, ಅದನ್ನು ಪತಿಗೆ ಕಳುಹಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ದೂರಿನ ಮೇರೆಗೆ ಅತ್ತಾಪುರ ಪೊಲೀಸರು ‘ಭಾರತೀಯ ನ್ಯಾಯ ಸಂಹಿತಾ’ ಮತ್ತು ಐಟಿ ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ (NPA) ಆಂತರಿಕ ತನಿಖಾ ಸಮಿತಿಯು ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಸಾಕ್ಷ್ಯಗಳನ್ನು ಪರಿಶೀಲಿಸಿದೆ. ಆರೋಪಗಳಲ್ಲಿ ಸತ್ಯಾಂಶವಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಅಕಾಡೆಮಿಯು ಉದಯ್ ಕೃಷ್ಣಾ ರೆಡ್ಡಿ ಅವರನ್ನು ತರಬೇತಿಯಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಿತ್ತು . ಪೊಲೀಸರು ಇವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ನಡುವೆ ಉದಯ್ ಕೃಷ್ಣಾರೆಡ್ಡಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉದಯ್ ಕೃಷ್ಣಾ ರೆಡ್ಡಿ ಆಂಧ್ರಪ್ರದೇಶದ ಅನೇಕ ಯುವಕರಿಗೆ ಸ್ಫೂರ್ತಿ ಎಂದು ಹೇಳಲಾಗಿತ್ತು. ಅನಾಥರಾಗಿದ್ದ ಇವರನ್ನು ಅಜ್ಜಿ ಕೂಲಿ ಕೆಲಸ ಮಾಡಿ ಸಾಕಿ ಬೆಳೆಸಿದ್ದರು. 2013 ರಲ್ಲಿ ಕಾನ್‌ಸ್ಟೆಬಲ್ ಆಗಿ ಆಯ್ಕೆಯಾಗಿದ್ದ ಉದಯ್, ನಂತರ ಕೆಲಸಕ್ಕೆ ರಾಜೀನಾಮೆ ನೀಡಿ ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. 4 ಬಾರಿ ಆಯ್ಕೆಯಾಗುವಲ್ಲಿ ವಿಫಲರಾದರೂ, ಛಲ ಬಿಡದೇ 5ನೇ ಪ್ರಯತ್ನದಲ್ಲಿ ದೇಶಕ್ಕೆ 360 ನೇ ರ್ಯಾಂಕ್ ಗಳಿಸಿ ಐಪಿಎಸ್ ಅಧಿಕಾರಿಯಾಗಿದ್ದರು. ಆದರೆ, ಈಗ ಅವರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ತನಿಖಾ ವರದಿ ಹೊರಬಿದ್ದ ಬೆನ್ನಲ್ಲೇ, ಉದಯ್ ಕೃಷ್ಣಾ ರೆಡ್ಡಿ ಭಾನುವಾರ ತಮ್ಮ ವಾಟ್ಸಾಪ್ ಹಾಗೂ ಇನ್‌ಸ್ಟಾಗ್ರಾಮ್ ಸ್ಟೇಟಸ್‌ನಲ್ಲಿ “ನಾನು ಯಾವುದೇ ತಪ್ಪು ಮಾಡಿಲ್ಲ” ಎಂದು ಪೋಸ್ಟ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button