Kannada NewsKarnataka NewsLatest

*ಭೀಕರ ಅಪಘಾತ: ತಂದೆ-ಮಗಳು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಟ್ರ್ಯಾಕ್ಟರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ನಿಡಗುಂದಿ ಬಳಿ ಈ ದುರಂತ ಸಂಭವಿಸಿದೆ. ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾವೆ.

ಟ್ರ್ಯಾಕ್ಟರ್‌ನಲ್ಲಿ ಕಾರ್ಮಿಕರು ಕಬ್ಬು ಕಟಾವಿಗೆಂದು ಇಂಡಿಯಿಂದ ಮಂಡ್ಯಕ್ಕೆ ತೆರಳುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
.

Home add -Advt

Related Articles

Back to top button