Kannada NewsKarnataka NewsLatest

*ಐಸಿಸ್ ಉಗ್ರ ಸಂಘಟನೆಗೆ ಹಣಕಾಸಿನ ನೆರವು ಆರೋಪ: 8 ಸ್ಥಳಗಳಲ್ಲಿ ಇಡಿ ಅಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ಐಸಿಸ್ ಭಯೋತ್ಪಾದಕ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪಕ್ಕೆ ಸಬಂಧಿಸಿದಂತೆ ಬೆಂಗಳೂರಿನ 8 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಿರಿಯಾದಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸಿನ ನೆರವು, ಮುಸ್ಲಿಮರ ನೇಮಕಾತಿ ಮತ್ತು ಹಣಕಾಸು ನೆರವು ನೀಡಿದ ಪ್ರಕರಣ ಇದಾಗಿದೆ. ಎನ್​ಐಎ ದಾಖಲಿಸಿದ ಎಫ್​​ಐಆರ್​ ಆಧರಿಸಿ ಜಾರಿ ನಿರ್ದೇಶನಾಲಯ (ಇಡಿ) ಸಹ ಪ್ರಕರಣ ದಾಖಲಿಸಿಕೊಂಡಿದೆ.

ಇಕ್ರಾ ವೆಲ್ಫೇರ್ ಟ್ರಸ್ಟ್, GFM ಟ್ರಸ್ಟ್‌ ಮೂಲಕ ಹಣ ವರ್ಗಾವಣೆಯಾಗಿರುವ ವಿಚಾರ ಎನ್ ಐಎ ತನಿಖೆ ವೇಳೆ ಬಯಲಾಗಿತ್ತು. ಐಸಿಸ್ ಶಿಬಿರಕ್ಕೆ ಸೇರಲು ಹಣ ಬಳಸಲಾಗಿದೆ ಎಂಬುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button