Belagavi NewsBelgaum NewsKannada NewsKarnataka News

*ಕರ್ನಾಟಕದ ಬಹುತೇಕ ಭಾಗದಲ್ಲಿ ಎರಡು ದಿನ ಮಳೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಬಹುತೇಕ ಭಾಗಗಳಲ್ಲಿ ಇನ್ನೆರಡು ದಿನ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. 

ಇಂದು (ಜುಲೈ 22) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. 

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅನೇಕ ಕಡೆ ಮಳೆಯೊಂದಿಗೆ ಬಲವಾದ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.

Home add -Advt

ಜುಲೈ 23ರಂದು ಕೂಡ ಕರಾವಳಿ ಜಿಲ್ಲೆಗಳಲ್ಲಿ ಅನೇಕ ಕಡೆ ಮಳೆ ಮುಂದುವರಿಯಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

Related Articles

Back to top button