Kannada NewsKarnataka NewsLatestNationalPolitics

*ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವರೆಗೆ ಬಿಡಲ್ಲ: ರಾಹುಲ್ ಗಾಂಧಿ*

ಪ್ರಗತಿವಾಹಿನಿ ಸುದ್ದಿ: ನೀಟ್ ಪರೀಕ್ಷೆ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಬಳಿ ಧರಣಿ ನಡೆಸುತ್ತಿದ್ದ ವಿಪಕ್ಷ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವರೆಗೆ ಬಿಡಲ್ಲ ಎಂದು ರಾಹುಲ್ ಗಾಂಧಿ ಶಪಥ ಮಾಡಿದ್ದಾರೆ.

ರಾಹುಲ್ ಗಾಂಧಿ ಸಂದೇಶ

“ನಾವು ಸಂಸತ್ತಿನಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯ ಕುರಿತು ಚರ್ಚಿಸಲು ಅವಕಾಶ ಕೋರಿದ್ದೆವು. ಆದರೆ, ಚರ್ಚೆಗೆ ಅವಕಾಶ ನೀಡಲು ಸರ್ಕಾರಕ್ಕೆ ಆಸಕ್ತಿಯೇ ಇಲ್ಲ ಎಂಬುದು ಸ್ಪಷ್ಟವಾಯಿತು. ದೇಶದ ಕೋಟ್ಯಂತರ ಯುವಕರ ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಗೆಡವಲಾಗುತ್ತಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಗೃಹ ಸಚಿವ ಅಮಿತ್ ಶಾ ಕೂಡಲೇ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಬೇಕು. ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಪ್ರಧಾನಿಯವರು ದೇಶದ ಯುವಜನತೆಯಲ್ಲಿ ಕ್ಷಮೆಯಾಚಿಸಬೇಕು” ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಶಾಂತಿಯುತ ಮೆರವಣಿಗೆಯ ಮೇಲೆ ಪೊಲೀಸರು ನಡೆಸಿರುವ ಬಲಪ್ರಯೋಗ ಮತ್ತು ಲಾಠಿಚಾರ್ಜ್ ಅನ್ನು ಪ್ರತಿಪಕ್ಷಗಳು ತೀವ್ರವಾಗಿ ಖಂಡಿಸಿವೆ. ಯುವಕರ ಮತ್ತು ವಿದ್ಯಾರ್ಥಿಗಳ ಧ್ವನಿಯನ್ನು ಅಡಗಿಸಲು ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಈ ನ್ಯಾಯಕ್ಕಾಗಿನ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Home add -Advt

Related Articles

Back to top button