Karnataka NewsLatestPolitics

*ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕೈ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.

ನೀಟ್ ಪರೀಕ್ಷಾ ಅಕ್ರಮ ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಯುವಜನತೆ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ದೌರ್ಜನ್ಯವೆಸಗಿದ್ದರು. ಪೊಲೀಸರ ಕ್ರಮ ಖಂಡಿಸಿ ಹಾಗೂ ನೀಟ್ ಅಕ್ರಮದಿಂದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಕೊಡಿಸುವಂತೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ನಿವಾಸದ ಬಳಿ ಧರಣಿ ನಡೆಸಲಾಗಿತ್ತು. ಈ ವೇಳೆ ರಾಹುಲ್ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದು ಎಳೆದೊಯ್ದಿದ್ದರು.

ಪೊಲೀಸರ ಕ್ರಮ ಖಂಡಿಸಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಇಂದು ಬಿಜೆಪಿ ಕಾರ್ಯಕರ್ತರು ಬೆಂಗಳೂರಿನ ಮಲ್ಲೇಶ್ವರಂ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಬ್ಯಾರಿಕೆಡ್ ಗಳನ್ನು ಅಳವಡಿಸಿ ತಡೆ ನೀಡಿದ್ದಾರೆ. ಆದಾಗ್ಯೂ ಕೈ ಕಾರ್ಯಕರ್ತರು ಬಿಜೆಪಿ ಕಚೇರಿಯತ್ತ ಮುನ್ನುಗ್ಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ. ವಾಹನಗಳಲ್ಲಿ ತುಂಬಿ ಕರೆದೊಯ್ದಿದ್ದಾರೆ.

Home add -Advt

Related Articles

Back to top button