ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಸಚಿವಾಕಾಂಕ್ಷಿಗಳು ಖಾತೆ ಹಂಚಿಕೆ ವಿಚಾರವಾಗಿ ಸಿಎಂ ಯಡಿಯೂರಪ್ಪನವರಿಗೆ ದುಂಬಾಲು ಬಿದ್ದಿದ್ದಾರೆ. ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ತಮಗೆ ಜಲಸಂಪನ್ಮೂಲ ಖಾತೆ ನೀಡುವಂತೆ ಸಿಎಂ ಮುಂದೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಇಂದು ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಶಾಸಕ ರಮೇಶ್ ಜಾರಕಿಹೊಳಿ, ಸಿಎಂ ಮುಮ್ದೆ ಎರಡು ಬೇಡಿಕೆಯಿಟ್ಟಿದ್ದಾರೆ. ಮೊದಲನೆಯದಾಗಿ ತಮಗೆ ಜಲಸಂಪನ್ಮೂಲ ಖಾತೆಗೆ ಕೊಡಬೇಕು ಹಾಗೂ ಸಚಿವನಾದ ಮೇಲೆ ವಿಧಾನಸೌಧದಲ್ಲಿ ಕೊಠಡಿ ಸಂಖ್ಯೆ 336 ಮತ್ತು 337 ನೀಡಬೇಕು ಎಂದು ಪಟ್ಟುಹಿಡಿದಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಶಾಸಕ ಮಹೇಶ್ ಕುಮಟಳ್ಳಿ ಮನವೊಲಿಸುವ ಜವಾಬ್ದಾರಿಯನ್ನೂ ರಮೇಶ್ ಹೊತ್ತಿದ್ದಾರೆ ಎನ್ನಲಾಗಿದೆ. ಆದರೆ ಸಿಎಂ ಯಡಿಯೂರಪ್ಪ, ನೂತನ ಶಾಸಕರಿಗೆ ಯಾವುದೇ ಸ್ಥಾನದ ಖಚಿತ ಭರವಸೆಯನ್ನೂ ನೀಡಿಲ್ಲ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ