Kannada NewsKarnataka NewsLatest

*ಪಿಜಿಯಲ್ಲಿ ಸಿಲಿಂಡರ್ ಸ್ಫೋಟ: 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಪಿಜಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರು ಹೊರವಲಯದ ಬೊಮ್ಮಸಂದ್ರದಲ್ಲಿ ಈ ಘಟನೆ ನಡೆದಿದೆ. ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬವರಿಗೆ ಸೇರಿದ ಪಿಜಿ ಇದಾಗಿದ್ದು, ಲಿಂಗರಾಜು ಎಂಬವರಿಗೆ ಲೀಸ್‌ಗೆ ನೀಡಿದ್ದರು. ಈ ಕಟ್ಟಡ 18 ಕೊಠಡಿಗಳನ್ನು ಒಳಗೊಂಡಿದ್ದು, 10ಕ್ಕೂ ಹೆಚ್ಚು ಅನ್ಯರಾಜ್ಯದವರು ವಾಸವಾಗಿದ್ದರು. ಉತ್ತರ ಭಾರತದ ಕಾರ್ಮಿಕರು ಈ ಪಿಜಿಯಲ್ಲಿ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ಎದ್ದು ಲೈಟ್‌ ಆನ್‌ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟಗೊಂಡಿದೆ.

ಸಿಲಿಂಡರ್ ಸ್ಫೋಟದಿಂದ ಗಂಭೀರ ಗಾಯಗೊಂಡಿರುವ ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಬೆಂಕಿ ನಂದಿಸಿದ್ದಾರೆ. ಸ್ಫೋಟದ ರಭಸಕ್ಕೆ ಪಿಜಿಯಲ್ಲಿದ್ದ ವಸ್ತುಗಳೆಲ್ಲ ಪುಡಿ ಪುಡಿಯಾಗಿದ್ದು, ಚೆಲ್ಲಾಪಿಲ್ಲಿಯಾಗಿವೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt

Related Articles

Back to top button