Kannada NewsKarnataka NewsLatest

*ಕೆಪಿಎಸ್ ಸಿಯಲ್ಲಿ ಮತ್ತೊಂದು ಅಕ್ರಮ ಆರೋಪ: ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರಿ ಗೋಲ್ಮಾಲ್*

ಪ್ರಗತಿವಾಹಿನಿ ಸುದ್ದಿ: ಹಲವು ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತ್ತಿನ ನಡುವೆಯೇ ಕೆಪಿಎಸ್​​ಸಿಯಲ್ಲಿ ಮತ್ತೊಂದು ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನೇ ರದ್ದುಗೊಳಿಸುವಂತೆ ಆಕಾಂಕ್ಷಿಗಳು ಒತ್ತಾಯಿಸಿದ್ದಾರೆ. ನೇಮಕಾತಿಯಲ್ಲಿ ಶೇ.60ರಷ್ಟು ಅಕ್ರಮ ಆಗಿರುವ ಬಗ್ಗೆ ಆರೋಪಿಸಲಾಗಿದ್ದು, ಇದರಲ್ಲಿಯೂ ಇತ್ತೀಚೆಗಷ್ಟೇ ಅಮಾನತ್ತಾಗಿರುವ ಶಿವಶಂಕರಪ್ಪ ಸಾಹುಕಾರ್ ಹೆಸರು ಕೇಳಿಬಂದಿದೆ.

ಜನವರಿ 8 ರಂದು 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಪರೀಕ್ಷೆ ನಡೆದಿದ್ದು, ಜುಲೈ 17ರಂದು ಹೊರಬಿದ್ದ ಫಲಿತಾಂಶ ಕಂಡು ಅಭ್ಯರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಒಂದು ಹುದ್ದೆ ಬರೋಬ್ಬರಿ 80 ಲಕ್ಷ ರೂಪಾಯಿಗೆ ಬಿಕರಿ ಆಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ 50ಕ್ಕೂ ಹೆಚ್ಚು ಅಭ್ಯರ್ಥಿಗಳು ವಿಧಾನಸೌಧ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Home add -Advt

ಗ್ರೂಪ್ ಎ ಹುದ್ದೆಯಾಗಿರುವ ಪಶು ವೈದ್ಯಾಧಿಕಾರಿಗಳ ಸೀಟ್​​​ಗೆ ದುಡ್ಡು ಕೊಡಿ ಎಂದು ಅಭ್ಯರ್ಥಿಗಳಿಗೆ ಕರೆ ಮಾಡಿ ಬೇಡಿಕೆ ಇಟ್ಟಿದ್ದಾರೆ. ಶಿವಶಂಕರಪ್ಪ ಸೇರಿ ಹಲವರು ಇದರಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ನೇಮಕಾತಿ ಪ್ರಕ್ರಿಯೆಯನ್ನೇ ರದ್ದು ಮಾಡಬೇಕು. UPSC ಬರೆದ ಅಭ್ಯರ್ಥಿಗಳು ಪಾಸ್ ಆಗಲು ಕಷ್ಟ ಪಟ್ಟಿದ್ದರೆ, ಶಿವಶಂಕರಪ್ಪ ಸಂಬಂಧಿಕರು ಮೆರಿಟ್ ಅಂಕ ಗಳಿಸಿದ್ದಾರೆ. ಪ್ರತಿಭಾವಂತ ವಿಧ್ಯಾರ್ಥಿಗಳು 300 ಅಂಕ ದಾಟುವುದು ಕಷ್ಟ ಇರುವಾಗ ಇದು ಹೇಗೆ ಸಾಧ್ಯ ಎಂದು ವಿಧ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತ್ ಕುಮಾರ್ ಪ್ರಶ್ನಿಸಿದ್ದಾರೆ.

Related Articles

Back to top button