Belagavi NewsBelgaum NewsCrimeKannada NewsKarnataka NewsNationalPolitics

*ಗಂಡನೊಂದಿಗೆ ಜಗಳ: ದೂದಗಂಗಾ ನದಿಗೆ ಹಾರಿದ ಗೃಹಿಣಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಂಡ ಮತ್ತು ಹೆಂಡತಿ ನಡುವೆ ಉಂಟಾದ ಸಣ್ಣ ಮನಸ್ತಾಪ ವಿಕೋಪಕ್ಕೆ ತಿರುಗಿ, ಗೃಹಿಣಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ದೂದಗಂಗಾ ನದಿ ತೀರದ ಸದಲಗಾ ಪಟ್ಟಣದಲ್ಲಿ ಘಟನೆ ನಡೆದಿದೆ.

ಸದಲಗಾ ಪಟ್ಟಣದ ನಿವಾಸಿ ಮಂಜುಳಾ ವಂಜೀರೆ (25) ನದಿಗೆ ಹಾರಿ ನಾಪತ್ತೆಯಾಗಿರುವ ದುರ್ದೈವಿ ಗೃಹಿಣಿ. ಸ್ಥಳೀಯರ ಮಾಹಿತಿ ಪ್ರಕಾರ, ಜಾತ್ರೆಗೆ ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಜುಳಾ ಹಾಗೂ ಅವರ ಪತಿ ಅನಿಲ್ ನಡುವೆ ತೀವ್ರ ಜಗಳ ನಡೆದಿದೆ. ಪತಿಯೊಂದಿಗೆ ಜಗಳವಾಡಿದ ಮಂಜುಳಾ, ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಸದಲಗಾ ಪಟ್ಟಣದ ಹೊರವಲಯದಲ್ಲಿ ಹರಿಯುವ ದೂದಗಂಗಾ ನದಿಯತ್ತ ತೆರಳಿದ್ದಾರೆ.

ನದಿಯ ದಂಡೆಯ ಮೇಲೆ ಮಂಜುಳಾ ಅವರ ಚಪ್ಪಲಿ ಹಾಗೂ ಬಟ್ಟೆಗಳು ಪತ್ತೆಯಾಗಿದ್ದು, ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಕುಟುಂಬಸ್ಥರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ NDRF ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೂದಗಂಗಾ ನದಿಯಲ್ಲಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ. ಬೆಳಿಗ್ಗೆಯಿಂದಲೂ ಸತತವಾಗಿ ಹುಡುಕಾಟ ನಡೆಸಲಾಗುತ್ತಿದ್ದರೂ, ನೀರಿನ ಹರಿವು ಮತ್ತು ಆಳ ಹೆಚ್ಚಿರುವುದರಿಂದ ಮಂಜುಳಾ ಅವರ ಸುಳಿವು ಇನ್ನು ಸಿಕ್ಕಿಲ್ಲ.ಘಟನೆಗೆ ಸಂಬಂಧಿಸಿದಂತೆ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂ ತನಿಖೆ ಮುಂದುವರಿಸಿದ್ದಾರೆ.

Home add -Advt

Related Articles

Back to top button