Kannada NewsKarnataka NewsLatestNationalTravel

*ದೇವಸ್ಥಾನಕ್ಕೆ ತೆರಳುತ್ತಿದ್ದ ಇಬ್ಬರು ಸ್ನೇಹಿತರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ದೇವಸ್ಥಾನಕ್ಕೆ ತೆರಳುತ್ತಿದ್ದ ಇಬ್ಬರು ಸ್ನೇಹಿತರು ದುರ್ಮರಣ ಹೊಂದಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗೇಟ್ ಸಮೀಪ ನಡೆದಿದೆ.

ಕ್ಯಾಂಟರ್ ವಾಹನ ಹಾಗೂ ರಾಯಲ್ ಎನ್‌ಫೀಲ್ಡ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ದೇವಾಲಯಕ್ಕೆ ತೆರಳುತ್ತಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಚಿಂತಾಮಣಿ ತಿಮ್ಮಸಂದ್ರದ ಶಶಿ (25), ಬೆಂಗಳೂರು ನೆಲಮಂಗಲದ ತನುಷ್ (25) ಮೃತ ಸ್ನೇಹಿತರು. ಬೆಳ್ಳಂ ಬೆಳಗ್ಗೆ ಕಾಣಿಪಾಕಂ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಎನ್‌ಫೀಲ್ಡ್‌ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt

Related Articles

Back to top button