Kannada NewsKarnataka NewsLatest

*ಪ್ರಜ್ವಲ್ ರೇವಣ್ಣಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಎಂದ ಕಾರಾಗೃಹ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಅಜ್ಜಿ ಚೆನ್ನಮ್ಮ ನಿಧನ ಹಿನ್ನೆಲೆಯಲ್ಲಿ ಪೆರೋಲ್ ಗೆ ಅರ್ಜಿ ಸಲ್ಲಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪೆರೋಲ್ ನೀಡಲು ಕಾರಾಗೃಹ ಇಲಾಖೆ ನಿರಾಕರಿಸಿದೆ.

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವವರಿಗೆ ಕಾರಾಗೃಹ ಇಲಾಖೆ ಪೆರೋಲ್ ನೀಡಲು ಸಾಧ್ಯವಿಲ್ಲ ಮತ್ತು ಅಧಿಕಾರ ವ್ಯಾಪ್ತಿಯೂ ಇಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ.

ಪ್ರಜ್ವಲ್ ಅಜ್ಜಿ ಚೆನ್ನಮ್ಮ ನಿಧನ ಹಿನ್ನೆಲೆಯಲ್ಲಿ ತಿಥಿಯಲ್ಲಿ ಭಾಗಿಯಾಗಲು ಪ್ರಜ್ವಲ್ ರೇವಣ್ಣ ರೆರೋಲ್ ಗೆ ಅರ್ಜಿ ಸಲ್ಲಿಸಿದ್ದರು. ಕಾರಾಗೃಹ ಇಲಾಖೆ ಪೆರೋಲ್ ನಿರಾಕರಿಸಿರುವುದರಿಂದ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.


Related Articles

Back to top button