Kannada NewsKarnataka NewsLatest

*ಮುಂದುವರೆದ ಭಾರಿ ಮಳೆ: ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಇಂದು ಕೂಡ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ರಜೆ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ (ಪಿಯುಸಿ) ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ನಿನ್ನೆ ಕೂಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ದಕ್ಷಿಣ ಕನ್ನಡದಲ್ಲಿ ಮಳೆ ಹೆಚ್ಚಾಗುತ್ತಿರುವ ಕಾರಣ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೂ ಇಂದು ರಜೆ ನೀಡಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Related Articles

Back to top button