*ಥ್ಯಾಂಕ್ಯೂ ಫ್ರೆಂಡ್ಸ್….ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ನೀಟ್ ಪರೀಕ್ಷಾ ಪತ್ರಿಕೆ ಸೋರಿಕೆ ಹಗರಣದ ವಿರುದ್ಧ ಭಾರಿ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಮಧ್ಯರಾತ್ರಿ ಮತ್ತೊಂದು ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ.
ಈ ಹಿಂದೆಯೂ ಒಂದು ವಿಡಿಯೋ ಮೂಲಕ ಸಂದೇಶ ನೀಡಿದ್ದ ಪ್ರಧಾನಿ ಮೋದಿ, ಈಗ “ಥ್ಯಾಂಕ್ಯೂ ಫ್ರೆಂಡ್ಸ್” ಎಂದು ಹೇಳುವ ಮೂಲಕ ಯುವಕರಿಗೆ ಧನ್ಯವಾದ ಅರ್ಪಿಸಿದ್ದಾರೆ. ತಮ್ಮ ಹೊಸ ಸಂದೇಶದಲ್ಲಿ, ಪ್ರಧಾನಿ ಮೋದಿ ಅವರು ಹಿಂದಿನ ವಿಡಿಯೋಗೆ ದೊರೆತ ಪ್ರತಿಕ್ರಿಯೆಗಳ ಬಗ್ಗೆ ಉಲ್ಲೇಖಿಸಿದ್ದಾರೆ. “ನಿನ್ನೆ ನಿಮ್ಮನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತ್ತು. ನನ್ನ ವಿಡಿಯೋಗೆ ನೀವು ಪ್ರತಿಕ್ರಿಯಿಸಿದ್ದಕ್ಕೆ ಧನ್ಯವಾದಗಳು” ಎಂದು ಅವರು ಹೇಳಿದ್ದಾರೆ.
ಅಲ್ಲದೆ, “ಸಕಾರಾತ್ಮಕ ಸಲಹೆಗಳನ್ನು ನೀಡಿದ್ದಕ್ಕೆ ನಿಮಗೆ ಧನ್ಯವಾದಗಳು. ನಿಮ್ಮ ಪ್ರೀತಿಯಿಂದ ನಮ್ಮ ಸಾಮರ್ಥ್ಯ ಮತ್ತಷ್ಟು ಹೆಚ್ಚಾಗುತ್ತದೆ. ಯುವಕರೇ, ಎಲ್ಲರಿಗೂ ಧನ್ಯವಾದ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಈ ಸಂದೇಶವು ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಮತ್ತು ರಾಜಕೀಯ ಪಕ್ಷಗಳಿಂದ ನಡೆಯುತ್ತಿರುವ ಪ್ರತಿಭಟನೆಗಳ ಸಮಯದಲ್ಲಿ ಬಂದಿರುವುದು ಗಮನಾರ್ಹವಾಗಿದೆ.




