
ಪ್ರಗತಿವಾಹಿನಿ ಸುದ್ದಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ ನೀಡಿದ್ದಾರೆ.
ನೀಟ್ ಅಕ್ರಮ ಖಂಡಿಸಿ ಹಾಗೂ ಧರ್ಮೇಂದ್ರ ಪ್ರಧಾಅನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆಗೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರಿಗೆ ಸುದೀರ್ಘ ಪತ್ರ ಬರೆದಿರುವ ಧರ್ಮೇಂದ್ರ ಪ್ರಧಾನ್, ಜಂತರ್-ಮಂತರ್ ಹಾಗೂ ದೇಶ ನಿರ್ಮಾಣವಾಗುವ ಪರಿಸ್ಥಿತಿಯ ಲಾಭವನ್ನು ರಾಷ್ಟ್ರ ವಿರೋಧಿ ಶಕ್ತಿಗಳು ಪಡೆಯಬಾರದು. ದೇಶದ ಏಕತೆ ಹಾಗೆಯೇ ಇಳಿಯಬೇಕು. ವಿದ್ಯಾರ್ಥಿಗಳ ಭವಿಷ್ಯವು ಕಾನೂನು ತೊಡಕುಗಳಲ್ಲಿ ಸಿಲುಕಬಾರದು ನಮ್ಮ ಮಕ್ಕಳು ತಮ್ಮ ಭವಿಷ್ಯವನ್ನು ಓದಿನಲ್ಲಿ ಕಳೆಯಬೇಕು. ವೃತ್ತಿ ಜೀವನವನ್ನು ರೂಪಿಸಿಕೊಳ್ಳುವತ್ತ ಗಮನ ಹರಿಸಬೇಕು. ಇದನ್ನು ಪರಿಗಣಿಸಿ ನಾನು ನನ್ನ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ರಾಜೀನಾಮೆ ಪತ್ರದಲ್ಲಿ ಏನಿದೆ?
- NEET ಅಕ್ರಮದ ಹೊಣೆ:
ಮೇ 3, 2026 ರಂದು ನಡೆದ NEET-UG ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದವು. ಕೇಂದ್ರ ಸರ್ಕಾರ ತಕ್ಷಣ ಇದನ್ನು ಗಂಭೀರವಾಗಿ ಪರಿಗಣಿಸಿ CBI ತನಿಖೆಗೆ ಆದೇಶಿಸಿತು. ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆಯ ದಿನಾಂಕವನ್ನೂ ಘೋಷಿಸಲಾಯಿತು. ಮುಂದಿನ ವರ್ಷದಿಂದ ಪರೀಕ್ಷೆಯನ್ನು CBT ಮೋಡ್‌ನಲ್ಲಿ ನಡೆಸಲು ನಿರ್ಧರಿಸಲಾಯಿತು. - 20 ಲಕ್ಷ ವಿದ್ಯಾರ್ಥಿಗಳ ಪರೀಕ್ಷೆ ಯಶಸ್ವಿ:
“Whole of government approach” ಅಡಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ಸಹಕಾರದಿಂದ ಜೂನ್ 21, 2026 ರಂದು 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಮರುಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಜುಲೈ 16 ರಂದು ಫಲಿತಾಂಶ ಪ್ರಕಟವಾಯಿತು. ಬಡ ಹಿನ್ನೆಲೆಯಿಂದ ಬಂದ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಸಚಿವರು ಹೇಳಿದ್ದಾರೆ. - ರಾಜೀನಾಮೆಗೆ ಕಾರಣ:
“ಕಳೆದ 10 ದಿನಗಳ ಬೆಳವಣಿಗೆಗಳು ನನ್ನನ್ನು ದುಃಖಿತಗೊಳಿಸಿವೆ. ಇದು ನನ್ನ ವೈಯಕ್ತಿಕ ಪ್ರತಿಷ್ಠೆಯ ವಿಷಯವಲ್ಲ. ರಾಷ್ಟ್ರ ವಿರೋಧಿ ಶಕ್ತಿಗಳು ಈ ಪರಿಸ್ಥಿತಿಯ ಲಾಭ ಪಡೆಯಬಾರದು. ದೇಶದ ಏಕತೆ ಉಳಿಯಬೇಕು. ಯಾವುದೇ ವಿದ್ಯಾರ್ಥಿಯ ಭವಿಷ್ಯ ಕಾನೂನು ಚಕ್ರವ್ಯೂಹದಲ್ಲಿ ಸಿಲುಕಬಾರದು” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.
“ನಮ್ಮ ಮಕ್ಕಳು ಓದಿನಲ್ಲಿ ಸಮಯ ಕಳೆಯಬೇಕು, ವೃತ್ತಿ ನಿರ್ಮಾಣದ ಮೇಲೆ ಗಮನ ಹರಿಸಬೇಕು” ಎಂಬ ಕಾರಣಕ್ಕೆ ತಾವು ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
4 ದಶಕದ ಸೇವೆ
“ಕಳೆದ 4 ದಶಕಗಳಿಂದ ವಿದ್ಯಾರ್ಥಿ, ಶಿಕ್ಷಕ ಮತ್ತು ಶಿಕ್ಷಣ ಸುಧಾರಣೆಗೆ ನನ್ನನ್ನು ಸಮರ್ಪಿಸಿಕೊಂಡಿದ್ದೇನೆ. ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ರಾಷ್ಟ್ರಸೇವೆ ಮಾಡಲು ಅವಕಾಶ ಸಿಕ್ಕಿದ್ದಕ್ಕೆ ಕೃತಜ್ಞ” ಎಂದು ಪ್ರಧಾನ್ ಹೇಳಿದ್ದಾರೆ.
“ಭವಿಷ್ಯದಲ್ಲೂ ಭಾರತ ಮಾತೆ, ಒಡಿಶಾ ಜನತೆ ಮತ್ತು ದೇಶದ ಯುವಕರ ಆಕಾಂಕ್ಷೆಗಳ ಈಡೇರಿಕೆಗೆ ಶ್ರಮಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.



