
ಪ್ರಗತಿವಾಹಿನಿ ಸುದ್ದಿ: ಧಾರ್ಮಿಕ ದತ್ತಿ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಜಾರಿಯಾಗಿದೆ. ಸಮೂಹ “ಎ” ಕಿರಿಯ ಶ್ರೇಣಿ ಅಧಿಕಾರಿಗಳಿಗೆ ಹಿರಿಯ ಶ್ರೇಣಿ ಹುದ್ದೆಗೆ ಮುಂಬಡ್ತಿ ನೀಡುತ್ತಾ, ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಪಿ. ಜಯಮ್ಮ ಸಹಾಯಕ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು → ಕಾರ್ಯನಿರ್ವಾಹಕ ಅಧಿಕಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯ, ಉಡುಪಿ ಜಿಲ್ಲೆ(ಖಾಲಿ ಹುದ್ದೆ).
ಸಿ.ಜಿ. ಕೃಷ್ಣ, ಕಾರ್ಯನಿರ್ವಾಹಕ ಅಧಿಕಾರಿ, ಶ್ರೀಕಂಠೇಶ್ವರಸ್ವಾಮಿ ದೇವಾಲಯ, ನಂಜನಗೂಡು → ಕಾರ್ಯದರ್ಶಿ, ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಮೈಸೂರು ( ಎಂ.ಜೆ. ರೂಪ, KAS ಅವರ ಜಾಗಕ್ಕೆ).
ಎಸ್. ಲಕ್ಷ್ಮೀ ನಾರಾಯಣ, ಕಾರ್ಯನಿರ್ವಾಹಕ ಅಧಿಕಾರಿ, ಶ್ರೀ ಕಬ್ಬಾಳಮ್ಮ ದೇವಾಲಯ, ರಾಮನಗರ → ಕಾರ್ಯನಿರ್ವಾಹಕ ಅಧಿಕಾರಿ, ಶ್ರೀಕಂಠೇಶ್ವರಸ್ವಾಮಿ ದೇವಾಲಯ, ನಂಜನಗೂಡು, ಮೈಸೂರು (ಖಾಲಿ ಹುದ್ದೆ).
ಪ್ರಶಾಂತ್ ಕುಮಾರ್ ಶೆಟ್ಟಿ ಅವರನ್ನು ಸಹಾಯಕ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ, ದಕ್ಷಿಣ ಕನ್ನಡ, ಮಂಗಳೂರು ಹುದ್ದೆಗೆ ನಿಯುಕ್ತಿಗೊಳಿಸಲಾಗಿದೆ.
ಎಂ.ಜೆ. ರೂಪ, KAS ಅವರ ಸೇವೆಯನ್ನು ಅವರ ಮೂಲ ಇಲಾಖೆಯಾದ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಗೆ ಹಿಂದಿರುಗಿಸಲಾಗಿದೆ.



