ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ಇಲ್ಲದಿದ್ದರೆ ಇವರು ಸಂಸದರಾಗುತ್ತಿದ್ದರೇ?

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಮಹಾತ್ಮಾ ಗಾಂಧಿ ನೇತೃತ್ವದ ಸ್ವಾತಂತ್ರ್ಯ ಹೋರಾಟ ಒಂದು ನಾಟಕ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ಮುಂದುವರೆಸಿದ್ದಾರೆ. ಅನಂತ್ ಕುಮಾರ್ ಹೆಗಡೆ ನಾಚಿಕೆ, ಮಾನ- ಮರ್ಯಾದೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಗಾಂಧೀಜಿ, ನೆಹರು, ವಲ್ಲಭಬಾಯಿ ಪಟೇಲ್ ಜೊತೆಗೆ ಅನಂತ ಕುಮಾರ್ ಹೆಗಡೆ ಕೂಡ ಸ್ವಾತಂತ್ರ್ಯ ಹೋರಾಟ ನಡೆಸುತ್ತಿದ್ದರು. ಹಾಗಾಗಿ ಅವರು ಅಷ್ಟು ಕರಾರುವಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಅನಂತ್ ಕುಮಾರ್ ಹೆಗಡೆ ನಾಚಿಕೆ, ಮಾನ- ಮರ್ಯಾದೆ ಇಲ್ಲದವರು. ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದರೂ ಕೇಂದ್ರದ ಮಂತ್ರಿಯಾಗಿದ್ದರು. ಸ್ವಾತಂತ್ರ ಹೋರಾಟಗಾರರ ಬಗ್ಗೆ ಲಘುವಾಗಿ ಮಾತಾನಾಡೋದು ಸರಿಯಲ್ಲ. ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಮಹನಿಯರು ಪ್ರಾಣ ಕಳೆದುಕೊಂಡು, ಕುಟುಂಬ ತ್ಯಜಿಸಿ ಜೈಲುವಾಸ ಅನುಭವಿಸಿ ನಮಗೆ ಸ್ವಾತಂತ್ರ್ಯ ಕೊಡಿಸಿದ್ದಾರೆ ಅಂತವರ ಬಗ್ಗೆ ಅಗೌರವದಿಂದ ಮಾತನಾಡಬಾರದು ಎಂದರು.

ಸ್ವಾತಂತ್ರ್ಯ ಹೋರಾಟಗಾರರು ಇಲ್ಲದಿದ್ದರೆ, ಸಂವಿಧಾನ ಇಲ್ಲದಿದ್ದರೆ ಅನಂತಕುಮಾರ್ ಹೆಗಡೆ ಸಂಸದ ಆಗುತ್ತಿದ್ದರಾ? ಸಂವಿಧಾನ ಬಂದ ಮೇಲೆಯೇ ಎಲ್ಲರಿಗೂ ಮತ ಹಾಕುವ ಹಕ್ಕು ಸಿಕ್ಕಿದ್ದು. ಸಂವಿಧಾನ ಓದದೆ ಇವರೆಲ್ಲ ಸಂಸದರು ಯಾಕೆ ಆಗುತ್ತಾರೆ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button