Kannada NewsKarnataka NewsNationalPolitics

*ಸಚಿವ ಸಂಪುಟ ವಿಸ್ತರಣೆ: ನಾಳೆ ದೆಹಲಿಗೆ ತೆರಳಲಿದ್ದಾರೆ ರಾಜ್ಯ ನಾಯಕರು*

ಪ್ರಗತಿವಾಹಿನಿ ಸುದ್ದಿ: ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕರ್ನಾಟಕ ಕಾಂಗ್ರೆಸ್‌ನ ಪ್ರಮುಖ ನಾಯಕರು  ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.

20 ಜನ ಹೊಸ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಮಂಗಳವಾರ ಅಥವಾ ಬುಧವಾರ ನಡೆಯುವ ಸಾಧ್ಯತೆ ಇದೆ ಎನ್ನಾಲಾಗಿದೆ

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ರಾಷ್ಟ್ರ ರಾಜಧಾನಿಗೆ ತೆರಳುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ನಾಯಕರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಸಭೆ ನಡೆಸಿ, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಶಾಸಕರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. ಆದರೆ ಆ ಪಟ್ಟಿಗೆ ರಾಹುಲ್ ಗಾಂಧಿ ಅವರ ಅಂತಿಮ ಒಪ್ಪಿಗೆ ಅಗತ್ಯವಿದೆ.

ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿರುವುದರಿಂದ ಪಟ್ಟಿಯಲ್ಲಿ ಕೆಲವು ಬದಲಾವಣೆಗಳಾಗುವ ಸಾಧ್ಯತೆಯೂ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಭಿಪ್ರಾಯವೂ ಈ ಪ್ರಕ್ರಿಯೆಯಲ್ಲಿ ಮಹತ್ವದ್ದಾಗಿರಲಿದೆ ಎನ್ನಲಾಗಿದೆ.

Home add -Advt

Related Articles

Back to top button