Kannada NewsLatestNationalPolitics

“ವಿಕಸಿತ್ ವೈಬ್ರಂಟ್‌ ವಿಲೇಜ್‌-2026: ಯುವ ಜನತೆಯೊಂದಿಗೆ ಸಂವಾದ ನಡೆಸಿದ ಪ್ರಧಾನಿ

ಪ್ರಗತಿವಾಹಿನಿ ಸುದ್ದಿ: “ವಿಕಸಿತ್ ವೈಬ್ರಂಟ್‌ ವಿಲೇಜ್‌-2026” ಕಾರ್ಯಕ್ರಮದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಯುವ ಜನತೆಯೊಂದಿಗೆ ಸಂವಾದ ನಡೆಸಿದರು.

ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶವನ್ನು ಪ್ರತಿನಿಧಿಸುವ ಆಯ್ದ 400ಕ್ಕೂ ಹೆಚ್ಚು ಯುವ ಜನರು ಈ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾದರು. ದೇಶಾದ್ಯಂತ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆ ನಡೆಸಿ, ಇದರಲ್ಲಿ ಪಾಲ್ಗೊಂಡಿದ್ದ 3 ಲಕ್ಷಕ್ಕೂ ಅಧಿಕ ಯುವಜನರ ಪೈಕಿ ಅಂತಿಮವಾಗಿ 400 ಅರ್ಹ ವಿದ್ಯಾರ್ಥಿ-ಯುವಜನರನ್ನು ಆಯ್ಕೆ ಮಾಡಲಾಗಿತ್ತು.

ಜೂನ್ 4ರಿಂದ ಜೂನ್ 30ರವರೆಗೆ ʼವಿಕಸಿತ್ ವೈಬ್ರಂಟ್ ವಿಲೇಜ್ ಪ್ರೋಗ್ರಾಂ-2026ʼ ಆಯೋಜಿಸಿ ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ 74 ವೈಬ್ರಂಟ್ ಗಡಿ ಗ್ರಾಮಗಳನ್ನು ಸಂಪರ್ಕಿಸುವ ಅರ್ಹ ಯುವಕರನ್ನು ಆಯ್ಕೆ ಮಾಡಲಾಗಿತ್ತು. ಭಾರತದ ಗಡಿ ಪ್ರದೇಶಗಳ ಸಾಮಾಜಿಕ-ಆರ್ಥಿಕ, ಭೂದೃಶ್ಯ, ಸಾಂಸ್ಕೃತಿಕ ಪರಂಪರೆ ಮತ್ತು ಅಭಿವೃದ್ಧಿ ಆಕಾಂಕ್ಷೆಗಳಿಗೆ ನೇರವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಇಂದು ನಡೆದ ಪ್ರಧಾನಿ ಮೋದಿಯವರೊಂದಿಗೆ ಸಂವಾದದ ವೇಲೆ ವಿದ್ಯಾರ್ಥಿಗಳು ಜೂನ್ 4ರಿಂದ 30ರವರೆಗೆ ನಡೆದ ಕಾರ್ಯಕ್ರಮದಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡರು.

ಈ ಕಾರ್ಯಕ್ರಮವು ಸಮುದಾಯದ ಭಾಗವಹಿಸುವಿಕೆ ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯಂತೆ ರಾಷ್ಟ್ರೀಯ ಏಕೀಕರಣ, ಗಡಿ ಗ್ರಾಮಗಳ ಕಾರ್ಯತಂತ್ರದ ಪ್ರಾಮುಖ್ಯತೆಗೆ ನಿದರ್ಶನವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button