Kannada NewsKarnataka NewsLatest

*ಗ್ಯಾರೇಜ್ ನಲ್ಲಿ ಭೀಕರ ಬೆಂಕಿ ಅವಘಡ: ಐಷಾರಾಮಿ ಕಾರುಗಳು ಸೇರಿ 20ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮ*

ಪ್ರಗತಿವಾಹಿನಿ ಸುದ್ದಿ: ಗ್ಯಾರೇಜ್ ವೊಂದರಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಐಷಾರಾಮಿ ಕಾರುಗಳು ಸೇರಿ 20ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಥಣಿಸಂದ್ರದ ಗ್ಯಾರೇಜ್ ವೊಂದರಲ್ಲಿ ಈ ಘಟನೆ ನಡೆದಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಗ್ಯಾಅರೇಜ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿಕೊಂಡು ಉರಿಯಲಾರಂಭಿಸಿದೆ. ಗ್ಯಾರೇಜ್ ನಲ್ಲಿ ನಿಲ್ಲಿಸಿದ್ದ ವಾಹನಗಳಿಗೂ ಬೆಂಕಿ ವ್ಯಾಪಿಸಿದೆ.

ಪರಿಣಾಮ 20ಕ್ಕೂ ಹೆಚ್ಚು ವಾಹನಗಳು ಧಗಧಗನೆ ಹೊತ್ತಿ ಉರಿದಿವೆ. ಸ್ಥಳಕ್ಕಾಗಮಿಸಿದ ಐದು ಅಗ್ನಿಶಾಮಕ ವಾಹನ ಹಾಗೂ ಸಿಬ್ಬಂದಿಗಳಿಂದ ಬೆಂಕಿ ನಂದಿಸಲಾಗಿದೆ. ಆದರೆ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಸಂಪಿಗೆಹಳ್ಳಿ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button