
ಪ್ರಗತಿವಾಹಿನಿ ಸುದ್ದಿ: ಉದ್ಯಮಿಯೊಬ್ಬರು ಲಾಡ್ಜ್ ರೂಮ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಶಿವಮೊಗ್ಗ ನಗರದ ಲಾಡ್ಜ್ ವೊಂದರಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗದ ಗೋಪಾಳ ಬಡಾವಣೆಯ ನಿವಾಸಿ ನವೀನ್ ಕುಮಾರ್ ಬಳಗಾರ್ ಅಲಿಯಾಸ್ ಬಸವರಾಜ್ (42) ಆತ್ಮಹತ್ಯೆಗೆ ಶರಣಾದ ಉದ್ಯಮಿ. ಇವರು ಕ್ರಷರ್ ಉದ್ಯಮ ನಡೆಸುತ್ತಿದ್ದರು.
ನಗರದ ಲಾಡ್ಜ್ ನಲ್ಲಿ ರೂಮ್ ಬಾಡಿಗೆಗೆ ಪಡೆದುಕೊಂಡು ಅಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಕೆಲ ವರ್ಷಗಳಿಂದ ಉದ್ಯಮದಲ್ಲಿ ಉಂಟಾಗಿದ್ದ ನಷ್ಟ ಹಾಗೂ ವಿಪರೀತ ಸಾಲದ ಹೊರೆಯಿಂದಾಗಿ ಅವರು ಮನನೊಂದಿದ್ದರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




