Belagavi NewsBelgaum NewsKannada NewsKarnataka NewsLatest

*ತೋಟದಲ್ಲಿ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ಸಾವು*

ಪ್ರಗತಿವಾಹಿನಿ ಸುದ್ದಿ: ಟಾಟಾ ಕಾಫಿ ತೋಟದಲ್ಲಿ ದೈನಂದಿನ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ಬೃಹತ್ ಗಾತ್ರದ ಮರವೊಂದು ಇದ್ದಕ್ಕಿದ್ದಂತೆ ಉರುಳಿ ಬಿದ್ದ ಪರಿಣಾಮ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಾಪುರ ಸಮೀಪದ ಬಿಳಿಗೇರಿ ಗ್ರಾಮದಲ್ಲಿ ಈ ಭೀಕರ ದುರಂತ ಸಂಭವಿಸಿದೆ.

ಮೃತರನ್ನು ಅಸ್ಸಾಂ ಮೂಲದ ಪರ್ಬಿನಾ ಖಾತುನ್ (29) ಮತ್ತು ಅಲೆಮನ್ (48) ಎಂದು ಗುರುತಿಸಲಾಗಿದೆ. ಮರ ಬಿದ್ದ ರಭಸಕ್ಕೆ ಇವರ ಜೊತೆ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸೋಮವಾರಪೇಟೆ ತಹಶೀಲ್ದಾರ್ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button