Belagavi NewsBelgaum NewsKannada NewsKarnataka NewsLatest
*ರಾಕ್ಕಸಕೊಪ್ಪ ಡ್ಯಾಂ ಭರ್ತಿ: ಇನ್ನೊಂದು ವರ್ಷ ಬೆಳಗಾವಿ ಜನತೆಗೆ ಇಲ್ಲ ಕುಡಿಯುವ ನೀರಿನ ಸಮಸ್ಯೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶ ಹಾಗೂ ತಿಲಾರಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ ನಗರದ ಜನರ ಕುಡಿಯುವ ನೀರಿನ ಮೂಲವಾದ ರಾಕ್ಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.
ಸತತ ಮಳೆಯಿಂದ ಅಪಾರ ಪ್ರಮಾಣದ ನೀರು ಹರಿದುಬಂದಿದ್ದು,ಕುಡಿಯುವ ನೀರಿನ ಅಭಾವ ಎದುರಿಸುತ್ತಿದ್ದ ಬೆಳಗಾವಿ ಜನತೆಗೆ ಮುಂದಿನ ಒಂದು ವರ್ಷ ಸಮಸ್ಯೆ ಇಲ್ಲ ಎಂದು ತಿಳಿದು ಬಂದಿದೆ.
ಮಾರ್ಕಂಡೇಯ ನದಿಗೆ ಅಡ್ಡಲಾಗಿ ಇರೋ ಜಲಾಶಯವು ಅರ್ಧ ಟಿಎಂಸಿ ಸಾಮರ್ಥ್ಯ ಹೊಂದಿದ್ದು ಸಂಪೂರ್ಣ ಭರ್ತಿಯಾಗಿದೆ. ಹಾಗಾಗಿ ಇನ್ನೊಂದು ವರ್ಷ ಮಹಾನಗರದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಅಂದಾಜಿಸಲಾಗಿದೆ.




