Kannada NewsKarnataka NewsLatest

*ಹಣದ ಬೇಡಿಕೆ ಆರೋಪ: ಡಿವೈಎಸ್‌ಪಿ, ಸರ್ಕಲ್ ಇನ್ಸ್‌ಪೆಕ್ಟ‌ರ್ ಸೇರಿ ಮೂವರ ಅಮಾನತು*

ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಇಲಾಖೆ ಕಚೇರಿಯಲ್ಲಿ ಹಣದ ಬೇಡಿಕೆ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಕಾರ್ಕಳ ಡಿವೈಎಸ್‌ಪಿ, ಸರ್ಕಲ್ ಇನ್ಸ್‌ಪೆಕ್ಟ‌ರ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ.

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಪ್ರತಿಕ್ರಿಯಿಸಿ, “ವಿಡಿಯೋಗಳು ಹಾಗೂ ಆರೋಪಗಳ ಆಧಾರದ ಮೇಲೆ ಹೆಚ್ಚುವರಿ ಎಸ್‌ಪಿ ಅವರಿಂದ ಪ್ರಾಥಮಿಕ ತನಿಖೆ ನಡೆಸಲಾಗಿದೆ. ತನಿಖಾ ವರದಿಯ ಮೇರೆಗೆ ಕಾರ್ಕಳ ಡಿವೈಎಸ್‌ಪಿ ವಿಜಯ ಪ್ರಸಾದ್, ಸರ್ಕಲ್ ಇನ್ಸ್‌ಪೆಕ್ಟರ್ ಸಂದೀಪ್ ಹಾಗೂ ಡಿವೈಎಸ್‌ಪಿ ಕಚೇರಿ ಸಿಬ್ಬಂದಿ ಶಿವಾನಂದ ಅವರನ್ನು ಇಲಾಖಾ ಶಿಸ್ತು ಕ್ರಮ ಪೂರ್ಣಗೊಳ್ಳುವವರೆಗೆ ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

Related Articles

Back to top button