Belagavi NewsBelgaum NewsKannada NewsKarnataka NewsLatestPolitics

*ಇಂದು ರಾಜ್ಯಾದ್ಯಂತ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದು 15 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಹಲವು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಇನ್ನು ಕೆಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಇದರೊಂದಿಗೆ ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ.

ಇನ್ನುಳಿದಂತೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಸಹ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೀದ‌ರ್, ವಿಜಯನಗರ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Home add -Advt

Related Articles

Back to top button