LatestNationalPolitics

*ಪ್ರಧಾನಿ ಮೋದಿ ವಿರುದ್ಧ ನಕಲಿ ವಿಡಿಯೋ ಹರಿಬಿಟ್ಟ ಆರೋಪ: ಮೆಟಾ ಇಂಡಿಯಾ ಮುಖ್ಯಸ್ಥನ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ವಿಡಿಯೋ ಹರಿಬಿಟ್ಟ ಆರೋಪದಲ್ಲಿ ಮೆಟಾ ಇಂಡಿಯಾ ಮುಖ್ಯಸ್ಥ ಅರುಣ್ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ ವೇಳೆ ಫೇಸ್ ಬುಕ್, ಇನ್ ಸ್ಟಾ ಗ್ರಾಂ ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ತಿರುಚಿದ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣ ಸಂಬಂಧ ಮೆಟಾ ಮುಖ್ಯಸ್ಥ ಅರುಣ್ ಶ್ರೀನಿವಾಸ್ ಸೇರಿದಂತೆ ಹಲವರ ವಿರುದ್ಧ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರಿಂದ ಎಫ್ಐಆರ್ ದಾಖಲಾಗಿದೆ.

ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಆರೋಪ ಹಿನ್ನೆಲೆಯಲ್ಲಿ ಮಹಿಳೆ ವಿರುದ್ಧವೂ ಜೀರೋ ಎಫ್ ಐ ಆರ್ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button