Belagavi NewsBelgaum NewsCrimeKannada NewsKarnataka NewsLatest

*ಲಾರಿ ಡಿಕ್ಕಿ: ರಸ್ತೆ ದಾಟುತ್ತಿದ್ದ ಯುವಕ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಸ್ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ  ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಕಿತ್ತೂರು ಸಮೀಪದ ಕಲಭಾವಿ ಗ್ರಾಮದ ಶ್ರವಣಕುಮಾರ ಪಾರೀಶ ಕುರ್ಕುರೆ ಮೃತಪಟ್ಟ ದುರ್ದೈವಿ. ಮೃತ ಯುವಕ ಹುಬ್ಬಳ್ಳಿಯಿಂದ ಬಂದು ಕಿತ್ತೂರು ಬಸ್ ನಿಲ್ದಾಣದ ಕಡೆ ತೆರಳುತ್ತಿದ್ದ ಈ ವೇಳೆ ಬಳಿಕ ರಸ್ತೆ ಅಡ್ಡದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಶ್ರವಣಕುಮಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನಾ‌ ಸ್ಥಳಕ್ಕೆ ಕಿತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button