Karnataka NewsLatestPolitics

*ವಿವೇಕ ಸ್ಮಾರಕ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ*

ಮೈಸೂರಿನಲ್ಲಿ ಪ್ರಧಾನಿ ಮೋದಿ

ಪ್ರಗತಿವಾಹಿನಿ ಸುದ್ದಿ: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಐತಿಹಾಸಿಕ ‘ವಿವೇಕ ಸ್ಮಾರಕ’ವನ್ನು (ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ) ಲೋಕಾರ್ಪಣೆಗೊಳಿಸಿದರು.

ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ನಾರಾಯಣಶಾಸ್ತ್ರೀ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮಕ್ಕೆ ತೆರಳಿದರು. ಅಲ್ಲಿ ಅಲ್ಲಿ ನಿರಂಜನ ಮಠದಲ್ಲಿ ವಿವೇಕ ಸ್ಮಾರಕ ಉದ್ಘಾಟನೆ ನೆರವೇರಿಸಿದರು.

1892 ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದ ವೇಳೆ ಇಲ್ಲಿ ವಾಸವಾಗಿದ್ದರು. ಈ ಐತಿಹಾಸಿಕ ನೆನಪಿನಲ್ಲಿ ಈ ಸ್ಮಾರಕ ನಿರ್ಮಿಸಲಾಗಿದೆ. ‘ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರ’ (ವಿವೇಕ ಸ್ಮಾರಕ) ಲೋಕಾರ್ಪಣೆ ಬಳಿಕ ವಿವೇಕಾನಂದರ ಬೋಧನೆಗಳನ್ನು ಓದಿದರು. ಬಳಿಕ ರಾಮಕೃಷ್ಣ ಆಶ್ರಮದ ಶಾಲೆಗೆ ಭೇಟಿ ನೀಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರವನ್ನು ವೀಕ್ಷಿಸಿದರು. ಬಳಿಕ ರಾಮಕೃಷ್ಣ ಆಶ್ರಮದತ್ತ ಸಾಗಿದ ಪ್ರಧಾನಿ ಮೋದಿ ನೆರೆದಿದ್ದ ಜನರತ್ತ ಕೈಬೀಸಿದರು. ಈ ವೇಳೆ ಮೋದಿ ಮೋದಿ ಎಂಬ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

Home add -Advt

Related Articles

Back to top button