Kannada NewsKarnataka NewsLatest

*ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಇಂದು ಕೂಡ ಇರುವುದಿಲ್ಲ*

ಪ್ರಗತಿವಾಹಿನಿ ಸುದ್ದಿ: ಮಳೆ ಅಬ್ಬರಕ್ಕೆ ಹಲವೆಡೆ ಗುಡ್ಡ ಕುಸಿತ ಸಂಭವಿಸಿ ಅವಾಂತರಗಳು ಸೃಷ್ಟಿಯಾಗಿವೆ. ವಿವಿಧೆಡೆ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕೆಲ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ–ಶಿರಿಬಾಗಿಲು ಬಳಿ ರೈಲ್ವೆ ಹಳಿ ಮೇಲೆ ಗುಡ್ಡಕುಸಿತವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು–ಬೆಂಗಳೂರು ಮಾರ್ಗದಲ್ಲಿ ರೈಲು ಸಂಚಾರಕ್ಕೆ ಮತ್ತೆ ಅಡಚಣೆ ಉಂಟಾಗಿದೆ.

ಶನಿವಾರ ರಾತ್ರಿ ಕುಸಿದ ಮಣ್ಣು ತೆರವು ಕಾರ್ಯಾಚರಣೆ ಮಳೆ ಮತ್ತೆ ಹಳಿಗಳ ಮೇಲೆ ಮಣ್ಣು ಕುಸಿದಿದೆ. ನಿರಂತರ ಮಳೆ ಹಾಗೂ ಪದೇ ಪದೇ ಮುಣ್ಣು ಕುಸಿದು ಬೀಳುತ್ತಿರುವುದರಿಂದ ಇಂದು ಕೂಡ ಕೆಲವು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ ಹಾಗೂ ಹಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ರೈಲ್ವೆ ಹಳಿ ಮೇಲೆ ಕೆಸರು ತುಂಬಿದ್ದು, ಹಳಿಯ ಪಕ್ಕದಲ್ಲೇ ಮೇಲಿನಿಂದ ನೀರು ಧುಮ್ಮಿಕ್ಕುತ್ತಿದೆ. ಮಣ್ಣು ಮತ್ತಷ್ಟು ಕುಸಿಯದಂತೆ ರೈಲ್ವೆ ಇಲಾಖೆ ಸಿಬ್ಬಂದಿ ಮರಳಿನ ಮೂಟೆಗಳನ್ನು ಜೋಡಿಸಿ ತಡೆಗೋಡೆ ನಿರ್ಮಿಸುತ್ತಿದ್ದಾರೆ.

ಗುಡ್ಡಕುಸಿತದ ಹಿನ್ನೆಲೆಯಲ್ಲಿ ಯಶವಂತಪುರ–ಕಾರವಾರ ಎಕ್ಸ್‌ಪ್ರೆಸ್, ಮಂಗಳೂರು–ಯಶವಂತಪುರ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ಹಾಗೂ ಕಾರವಾರ–ಕೆಎಸ್‌ಆರ್ ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಇಂದು ಕೂಡ ಸ್ಥಗಿತಗೊಳಿಸಲಾಗಿದೆ.

ಇನ್ನು ಬೆಂಗಳೂರು–ಮುರ್ಡೇಶ್ವರ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 17377 ವಿಜಯಪುರ–ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ಹಾಗೂ 17378 ಮಂಗಳೂರು ಸೆಂಟ್ರಲ್–ವಿಜಯಪುರ ಎಕ್ಸ್‌ಪ್ರೆಸ್ ರೈಲುಗಳನ್ನು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಮಾಡಲು ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ.

ಪ್ರಯಾಣಿಕರು ರೈಲು ಸಂಚಾರ ಸ್ಥಿತಿ ಗಮನಿಸಿ ಪ್ರಯಾಣಿಸುವಂತೆ ಸೂಚಿಸಲಾಗಿದೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button